ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ
Last Updated 8 ಮೇ 2020, 15:22 IST
ಅಕ್ಷರ ಗಾತ್ರ

ಶಿವಮೊಗ್ಗ: ತುಮಕೂರು–ಶಿವಮೊಗ್ಗಚತುಷ್ಪಥ ರಸ್ತೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶುಕ್ರವಾರನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕಾಮಗಾರಿ ನಾಲ್ಕು ಹಂತಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಮೂರು ಹಂತದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಗತಿಯಲ್ಲಿದೆ. 4ನೇ ಹಂತದ ಭದ್ರಾವತಿ-ಶಿವಮೊಗ್ಗ ನಡುವಿನ ಕಾಮಗಾರಿಗೆಇದುವರೆಗೂಚಾಲನೆ ನೀಡಿಲ್ಲ. ಈ ನಡುವೆ ರಸ್ತೆ ಬದಿಯ ಮರಗಳ ಕಟಾವಿಗೂಹಣ ಸಂದಾಯ ಮಾಡಲಾಗಿದೆ. ಅರಣ್ಯ ಇಲಾಖೆಯ ಮರಗಳಿಗೆ ನಿಯಮಾನುಸಾರ ಹಣ ಪಾವತಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾಮಗಾರಿ ನಡೆಸಲು ಎದುರಾಗಿರುವ ಸಮಸ್ಯೆ ಇತ್ಯರ್ಥಪಡಿಸಿಕೊಂಡುತಕ್ಷಣ ಶಿವಮೊಗ್ಗದಿಂದಲೇ ಕೆಲಸ ಆರಂಭಿಸಲುತಾಕೀತು ಮಾಡಿದರು.

ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ವಿಳಂಬ ಮಾಡುವ ಅಧಿಕಾರಿಗಳ ವರ್ತನೆ ಸಹಿಸಸುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇರಸ್ತೆ ಬದಿ ಗಿಡಗಳನ್ನು ನೆಟ್ಟು, 15 ವರ್ಷಗಳವರೆಗೆ ಪೋಷಿಸಬೇಕು ಎಂದುಸೂಚಿಸಿದರು.

ಕಾಮಗಾರಿಗೆ ಅಗತ್ಯವಿರುವ ಕಲ್ಲುಕ್ವಾರಿ, ಮರಳು ಕ್ವಾರಿಗಳನ್ನು ಜಿಲ್ಲಾಧಿಕಾರಿ ಅನುಮತಿ ಪಡೆದು, ಒದಗಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ಕಾಮಗಾರಿಯಲ್ಲಿ ದೊರೆತ ಕಲುಗಳನ್ನು ಈ ಕಾಮಗಾರಿಗೆ ಬಳಸಿಕೊಳ್ಳಲು ಸಹಕರಿಸುವಂತೆ ನೀರಾವರಿ ನಿಗಮದ ಅಧಿಕಾರಿಗಳಿಗೆಸೂಚಿಸಿದರು.ಕಾಮಗಾರಿ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಕೆರೆಗಳ ಹೂಳೂಎತ್ತಿಕೊಳ್ಳುವಂತೆಸಲಹೆ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಕಲ್ಲು, ಮರಳು, ಮಣ್ಣುಪೂರೈಸಲು ಜಿಲ್ಲಾಡಳಿತ ಅಗತ್ಯ ಸಹಕಾರ ನೀಡುತ್ತದೆ. ಶಿವಮೊಗ್ಗ ಹೊರವಲಯದ ವರ್ತುಲರಸ್ತೆ ನಿರ್ಮಾಣಮಾಡುವಲ್ಲಿ ಯಾವುದೇ ಅಡತಡೆ ಇಲ್ಲ. ಹಲವು ದಾಖಲೆಗಳನ್ನು ನಿರ್ವಹಿಸುವ ಕಾರ್ಯ ಭರದಿಂದ ಸಾಗಿದೆ. ಈ ತಿಂಗಳ ಅಂತ್ಯಕ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಊರಗಡೂರು ಮತ್ತು ಇಸ್ಲಾಪುರಗಳಲ್ಲಿನ ಸಣ್ಣ-ಪುಟ್ಟ ಸಮಸ್ಯೆ ಇತ್ಯರ್ಥಪಡಿಸಿ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕಶಿರೀಷ್ ಗಂಗಾಧರ್, ಜಿಲ್ಲಾ ಭೂಸ್ವಾಧೀನಾಧಿಕಾರಿ ಗಣಪತಿ ಕಟ್ಟಿನಕೆರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT