ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲಾಗಿತ್ತು. ರಾಜ್ಯಪಾಲರು ಈಗ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ಸ್ವಾಗತಾರ್ಹ. ಇದು ನಮ್ಮ ಹೋರಾಟಕ್ಕೆ ಸಿಕ್ಕಿರುವ ಜಯ’ ಎಂದರು.