ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಎದುರಿಸಲು ಜಿಲ್ಲಾಡಳಿತ ಸನ್ನದ್ಧ

Last Updated 2 ಜೂನ್ 2020, 10:39 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಂಗಾರಿನ ಅವಧಿಯ ಸಂಭಾವ್ಯ ಅಪಾಯಗಳನ್ನು ಎದುರಿಸಲುಜಿಲ್ಲಾಡಳಿತ ಸಿದ್ಧತೆ ನಡೆಸಿದೆಎಂದುಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಹಿಂದಿನ ಮುಂಗಾರು ಅವಧಿಯಲ್ಲಿ ಸಂಭವಿಸಿದಅತಿವೃಷ್ಟಿಸಾಕಷ್ಟು ನಷ್ಟ ಮಾಡಿತ್ತು. ಈ ಬಾರಿ ಮೊದಲೇಸಿದ್ಧತೆಮಾಡಿಕೊಳ್ಳಲು ಸೂಚಿಸಲಾಗಿದೆ. ಜಿಲ್ಲಾಡಳಿತದ ಬಳಿ ಲಭ್ಯವಿರುವ ಬೋಟು, ರಕ್ಷಣಾ ಕವಚಗಳು ಎಲ್ಲಾ ಸಾಧನ ಸಲಕರಣೆಗಳನ್ನೂಪರಿಶೀಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅತಿವೃಷ್ಟಿಯಿಂದ ಹಾನಿಗೀಡಾಗಬಹುದಾದ ಗ್ರಾಮಗಳನ್ನು ಈಗಲೇ ಗುರುತಿಸಬೇಕು. ತಾಲ್ಲೂಕಿನಲ್ಲಿ ಲಭ್ಯವಿರುವ ರಕ್ಷಣಾ ಸಾಮಾಗ್ರಿ, ಸಲಕರಣೆಗಳ ಪಟ್ಟಿಯನ್ನು ಸಿದ್ಧಪಡಿಸಿ, ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಮಳೆಗೆ ಸುಲಭವಾಗಿ ಕುಸಿಯಬಹುದಾದ ಮನೆ, ಕಟ್ಟಡಗಳನ್ನು ಗುರುತಿಸಿ ತೆರವುಗೊಳಿಸಬೇಕು. ಇಲ್ಲವೇ, ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ 6 ಬೋಟುಗಳು, 25 ರಕ್ಷಣಾ ಕವಚಗಳು, ಮುರಿದು ಬೀಳುವ ಮರಗಳನ್ನು ತೆರವುಗೊಳಿಸಲು 50 ಟ್ರೀ ಕಟ್ಟರ್‌ಗಳನ್ನು ಜಿಲ್ಲಾಡಳಿತ ನೀಡಿದೆ. ಹಲವುಸಾಹಸಿ ಸಂಘ, ಸಂಸ್ಥೆಗಳು ಮುಂದೆ ಬಂದಿವೆ.ಎಲ್ಲರ ಸಹಕಾರ ಪಡೆಯಬೇಕು. ಇದಕ್ಕಾಗಿ ಅಂತಹ ಸಂಘ,ಸಂಸ್ಥೆಗಳ ವಿವರ, ಅವರಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆಗಳ ವಿವರಗಳ ಪಟ್ಟಿ ಮಾಡಬೇಕು ಎಂದರು.

ನೆರೆ ನೀರು ಸುಲಭವಾಗಿ ನುಗ್ಗಬಹುದಾದ ತಗ್ಗು ಪ್ರದೇಶದಲ್ಲಿರುವ ಜನರಿಗೆ ಈಗಾಗಲೇ ಸೂಚನೆ ನೀಡಬೇಕು. ಒಂದು ವೇಳೆ ಜನರನ್ನು ತುರ್ತಾಗಿ ಸ್ಥಳಾಂತರಿಸುವಸಮಯ ಬಂದರೆ ಅವರಿಗೆ ತಾತ್ಕಾಲಿಕ ಪುನರ್ವಸತಿಗಾಗಿ ಎಲ್ಲಾ ತಾಲ್ಲೂಕುಗಳಲ್ಲಿ ಈಗಲೇ ಗುರುತಿಸಿ ಅಂದಾಜು ಪಟ್ಟಿ ಸಿದ್ಧಪಡಿಸಬೇಕು. ಗಾಳಿ ಮಳೆಗೆ ಉರುಳಿ ಬೀಳುವ ವಿದ್ಯುತ್ ಕಂಬಗಳನ್ನು ತಕ್ಷಣ ದುರಸ್ತಿ ಮಾಡಲು ಸಿದ್ದರಾಗಬೇಕು. ಅಗತ್ಯ ಪ್ರಮಾಣದ ವಿದ್ಯುತ್ ಕಂಬಗಳು,ವಿದ್ಯುತ್ ಪರಿವರ್ತಕಗಳು,ತಂತಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಮಳೆಯಿಂದ ಸಾವು ನೋವುಗಳು ಸಂಭವಿಸದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದುಸಲಹೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT