ಶನಿವಾರ, ಅಕ್ಟೋಬರ್ 23, 2021
20 °C

ಶಿಕಾರಿಪುರ: ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮಟೆಕೊಪ್ಪ (ಶಿಕಾರಿಪುರ): ಶಿಕಾರಿಪುರ ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದ ಸಮೀಪ ಶನಿವಾರ ಬೆಳಿಗ್ಗೆ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಕಪ್ಪನಹಳ್ಳಿ ಗ್ರಾಮದ (ಕ್ಯಾಂಪ್) ನಿವಾಸಿ ಹೇಮಾವತಿ (35) ಮೃತಪಟ್ಟವರು. ಅವರು ಸಂಡ ಗ್ರಾಮದ ಪಶು ಆಹಾರ ತಯಾರಿಕಾ ಘಟಕದಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಪಶು ಆಹಾರ ತಯಾರಿಕಾ ಘಟಕಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಮದರಖಂಡಿ ಹಾಗೂ ಸಿಪಿಐ ಲಕ್ಷ್ಮಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

‘ಕಪ್ಪನಹಳ್ಳಿ ಗ್ರಾಮದ ಅನಿಲ್‌ ಕೊಲೆ ಮಾಡಿದ್ದು, ಕ್ರಮ ಕೈಗೊಳ್ಳಬೇಕು’ ಎಂದು ಹೇಮಾವತಿ ಸಂಬಂಧಿ ನರಸಿಂಹ ದೂರು ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು