ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾದ ಮುರುಘಾಶ್ರೀ

ಚಿಕಿತ್ಸೆಗೆ ವೈದ್ಯರ ತಂಡ ನೇಮಕ: ಹೃದಯ ತಪಾಸಣೆ
Last Updated 22 ಸೆಪ್ಟೆಂಬರ್ 2022, 5:02 IST
ಅಕ್ಷರ ಗಾತ್ರ

ಶಿವಮೊಗ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಹೃದಯ ತಪಾಸಣೆಗಾಗಿ ಬುಧವಾರ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಕರೆತರಲಾಯಿತು.

ಇಲ್ಲಿನ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಪೊಲೀಸ್ ವಾಹನದಲ್ಲಿ ಆರೋಪಿಯನ್ನು ಕರೆತಂದ ಬಳಿಕ ಮುಖ್ಯ ಅಧೀಕ್ಷಕಿ ಸಿ.ಎಸ್.ಅನಿತಾ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಕಾರಾಗೃಹದ ಸುಪರ್ದಿಗೆ ಪಡೆದರು. ವೈದ್ಯರ ಶಿಫಾರಸ್ಸಿನಂತೆ ಅವರನ್ನು ಹೃದಯ ತಪಾಸಣೆಗೆ ಮೆಗ್ಗಾನ್‌ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವೈದ್ಯರ ತಂಡ ರಚನೆ: ‘ಮುರುಘಾ ಶರಣರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಯ ವೈದ್ಯರನ್ನು ಒಳಗೊಂಡ ತಂಡ ರಚಿಸಲಾಗಿದೆ. ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ಪರಮೇಶ್ವರಪ್ಪ ತಂಡದ ನೇತೃತ್ವ ವಹಿಸಿದ್ದಾರೆ' ಎಂದು ಶಿವಮೊಗ್ಗ ವೈದ್ಯಕೀಯ ಶಿಕ್ಷಣ ಸಂಸ್ಥೆ (ಸಿಮ್ಸ್) ಮುಖ್ಯಸ್ಥ ಡಾ.ವಿ.ವಿರೂಪಾಕ್ಷಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮುರುಘಾ ಶರಣರ ಆರೋಗ್ಯ ತಪಾಸಣೆ ನಂತರ ಆಸ್ಪತ್ರೆಯ ಯಾವ ವಿಭಾಗದಲ್ಲಿ ದಾಖಲಿಸಬೇಕು ಎಂಬುದನ್ನು ನಿರ್ಧರಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT