ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯ ಕಾನೂನು ಅಗತ್ಯ: ಕೆ.ಎಸ್.ಈಶ್ವರಪ್ಪ

Last Updated 28 ಆಗಸ್ಟ್ 2021, 11:57 IST
ಅಕ್ಷರ ಗಾತ್ರ

ಶಿವಮೊಗ್ಗ: ಅತ್ಯಾಚಾರಿಗಳಿಗೆ ತ್ವರಿತವಾಗಿ ಕಠಿಣ ಶಿಕ್ಷೆ ವಿಧಿಸುವ ಕಾನೂನು ರೂಪಿಸುವ ಅಗತ್ಯವಿದೆ. ಈಗಿರುವ ಕಾನೂನಿಗೆ ತಿದ್ದುಪಡಿ ತರಲು ಮುಂದಿನ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಅತ್ಯಾಚಾರಿಗಳಿಗೆ ಸರ್ಕಾರ, ಪೊಲೀಸರ ಬಗ್ಗೆ ಭಯವೇ ಇಲ್ಲ. ಮೈಸೂರು ಸೇರಿದಂತೆ ರಾಜ್ಯದ ಎಲ್ಲೆಡೆ ಅತ್ಯಾಚಾರ ಪ್ರಕರಣಗಳು ಮರುಕಳಿಸುತ್ತಿವೆ. ವಿಧಾನ ಪರಿಷತ್‌ ಸದಸ್ಯರಾಗಿದ್ದ ಸಮಯದಲ್ಲಿ ಕಾನೂನಿಗೆ ತಿದ್ದಿಪಡಿ ತರುವಂತೆ ಆಗ್ರಹಿಸಿದ್ದೆ. ಅಂದಿನ ಗೃಹ ಸಚಿವ ಜಾರ್ಜ್‌ ಭರವಸೆ ನೀಡಿದ್ದರು. ಇಂದಿಗೂ ಹಳೆಯ ಕಾನೂನು ಜಾರಿಯಲ್ಲಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಘಟನೆ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡಿರುವ ಹೇಳಿಕೆ ಸಹಜವಾಗಿದೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶ ಅವರಿಗೆ ಇರಲಿಲ್ಲ. ಪೊಲೀಸರು ಆರೋಪಿಗಳನ್ನು ತ್ವರಿತವಾಗಿ ಬಂಧಿಸಿದ್ದಾರೆ. ಅವರಿಗೆ ಕಠಿಣ ಶಿಕ್ಷೆ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT