ಶಿವಮೊಗ್ಗ: ಬಹುನಿರೀಕ್ಷಿತ ‘ನಮಸ್ತೇ ಗೋಷ್ಟ್’ ಸಿನಿಮಾ ನಗರದ ಭಾರತ್ ಚಿತ್ರಮಂದಿರ ಸೇರಿದಂತೆ ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ ಜುಲೈ 14ರಂದು ಬಿಡುಗಡೆಯಾಗಲಿದೆ ಎಂದು ಸಹಾಯಕ ನಿರ್ದೇಶಕಿ ರೂಪಾ ಅವರು ಹೇಳಿದರು.
ಇಲ್ಲಿನ ಭಾರತ್ ಚಿತ್ರಮಂದಿರದಲ್ಲಿ ಅಂದು ಮಧ್ಯಾಹ್ನ 2 ಗಂಟೆಗೆ ಚಿತ್ರ ಪ್ರದರ್ಶನವಾಗಲಿದೆ. ಜಿಲ್ಲೆಯ ಕಲಾತಂಡದವರೇ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರವಿದು ಎಂದು ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಹೇಳಿದರು.
ನಟ ಶಿವಮೊಗ್ಗ ಹರೀಶ್ ಮಾತನಾಡಿ, ಇದು ಭಯಾನಕ ಮತ್ತು ಹಾಸ್ಯಮಿಶ್ರಿತ ಚಿತ್ರವಾಗಿದೆ. ಇಯರ್‌ಫೋನ್ ಬಳಕೆಯಿಂದ ಏನಾಗಬಹುದು ಎಂಬ ಸಂದೇಶ ಕೂಡ ಇದರಲ್ಲಿದೆ. ಯುವಕರನ್ನು ಹೆಚ್ಚಾಗಿ ಇದು ಆಕರ್ಷಿಸುತ್ತದೆ. ಮುಖ್ಯ ಪಾತ್ರದಲ್ಲಿ ನಿರ್ದೇಶಕ ಭರತ್‌ನಂದಾ, ನಾಯಕಿಯಾಗಿ ವಿದ್ಯಾರಾಜ್ ಕಾಣಿಸಿಕೊಂಡಿದ್ದಾರೆ. ಮುಖ್ಯ ಪಾತ್ರಗಳಲ್ಲಿ ನಾನೂ ಸೇರಿದಂತೆ ಬಾಲರಾಜ್ ವಾಡಿ, ಶಿವಕುಮಾರ್ ಆರಾಧ್ಯ, ಅಖಿಲೇಶ್ ಮುಂತಾದವರು ನಟಿಸಿದ್ದಾರೆ ಎಂದರು.
ಪ್ರಮುಖರಾದ ಮಧುಸೂದನ್, ಅಖಿಲೇಶ್, ಶಶಿ, ಹೊಂಗಿರಣ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.