ಸೊರಬ: 15ನೇ ಹಣಕಾಸು ಆಯೋಗದ ಅನುದಾನದಡಿ ‘ನಮ್ಮ ಕ್ಲಿನಿಕ್’ ತೆರೆಯಲಾಗಿದ್ದು, ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಿರ್ಮಾಣಗೊಂಡ ನಮ್ಮ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ದಟ್ಟಣೆ ಹೆಚ್ಚಿದ್ದು, ರೋಗಿಗಳು ಕಾಯುವ ಪರಿಸ್ಥಿತಿ ಇದೆ. ಆ ಹೊರೆಯನ್ನು ತಪ್ಪಿಸುವ ಉದ್ದೇಶದಿಂದ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಕ್ಲಿನಿಕ್ನಲ್ಲಿ ತಲಾ ಒಬ್ಬ ವೈದ್ಯ, ಶುಶ್ರೂಷಕ, ಪ್ರಯೋಗಾಲಯ ತಜ್ಞ, ಡಿ-ದರ್ಜೆ ನೌಕರ ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಲಭ್ಯವಿದ್ದು, ಬಡವರು, ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ಅನುಕೂಲವಾಗಲಿದೆ ಎಂದರು.

ಕ್ಲಿನಿಕ್ ಬೆಳಿಗ್ಗೆ 9 ರಿಂದ ಸಂಜೆ 4.30 ರವರೆಗೆ ಸೋಮವಾರದಿಂದ ಶನಿವಾರದವರೆಗೆ ಕಾರ್ಯನಿರ್ವಹಿಸಲಿವೆ. ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚುಮದ್ದು ನೀಡುವ ಕೊಠಡಿ, ಪ್ರಯೋಗಲಯ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿಗಳಿವೆ. ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಟಿಎಚ್ಒ ಡಾ.ನೂತನ್ ಮಾಹಿತಿ ನೀಡಿದರು.

ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ, ಉಪಾಧ್ಯಕ್ಷೆ ಶ್ರೀರಂಜನಿ, ಮುಖಂಡರಾದ ಅಣ್ಣಪ್ಪ, ಪರಶುರಾಮ್, ಶೇಖರ್, ಡಿಎಚ್ಒ ಡಾ.ಕೆ.ಎಸ್.ನಟರಾಜ್, ಡಾ.ಮಲ್ಲಪ್ಪ, ಡಾ.ಶಿವಯೋಗಿ, ಪುರಸಭೆ ಸದಸ್ಯರು ಸೇರಿದಂತೆ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.