ರಿಪ್ಪನ್ಪೇಟೆ: ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಆರಂಭಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಶಿಮುಲ್ ಅಧ್ಯಕ್ಷ ವಿದ್ಯಾಧರ್ ಹೇಳಿದರು.

ಗ್ರಾಮದ ಶಿವಮೊಗ್ಗ ಹಾಗೂ ಸಾಗರ ರಸ್ತೆಯಲ್ಲಿ ಕೆ.ಎಂ.ಎಫ್ನ ನೂತನ ಮಿಲ್ಕ್ ಪಾರ್ಲರ್ಗಳನ್ನು ಸೋಮವಾರ ಉದ್ಘಾಟಿಸಿ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಉತ್ಸಾಹಿ ವಿದ್ಯಾವಂತ ಯುವಕ, ಯುವತಿಯರಿಗೆ ಸ್ವ ಉದ್ಯೋಗ ಕಲ್ಪಿಸುವ ಗುರಿ ಹೊಂದಿದ್ದು, ಕೆ.ಎಂ.ಎಫ್ ವ್ಯಾಪ್ತಿಯ ದಾವಣಗೆರೆ, ಚಿತ್ರದುರ್ಗ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವರ್ಷಾಂತ್ಯದೊಳಗೆ 75 ಹೊಸ ಮಿಲ್ಕ್ ಪಾರ್ಲರ್ಗಳನ್ನು ತೆರೆಯಲಾಗುವುದು. ಹೋಬಳಿ ಮಟ್ಟದಲ್ಲಿ ಮಿಲ್ಕ್ ಪಾರ್ಲರ್ಗಳನ್ನು ತೆರೆಯುವುದರಿಂದ ಗ್ರಾಮೀಣ ಜನತೆಗೆ ಗುಣಮಟ್ಟದ ಹಾಲಿನ ವಿವಿಧ ಉತ್ಪನ್ನಗಳು ದೊರೆಯಲಿವೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ. ರಾಮಚಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ವಿ.ಈಶ್ವರಪ್ಪಗೌಡ, ಸಹಕಾರ ಬ್ಯಾಂಕ್ ಆಧ್ಯಕ್ಷ ಪರಮೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಎನ್.ಚಂದ್ರೇಶ್, ಪ್ರಕಾಶ ಪಾಲೇಕರ್, ಮಹಾಲಕ್ಷ್ಮಿ ಅಣ್ಣಪ್ಪ, ಆಸಿಫ್, ಗಣಪತಿ ಗವಟೂರು ಹಾಗೂ ಕೆ.ಎಂ.ಎಫ್.ನ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.