ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ನಿರ್ಧಾರ ವಿರುದ್ಧ ನಾರಾಯಣ ಗುರು ಸ್ತಬ್ಧಚಿತ್ರದ ಮೆರವಣಿಗೆ

Last Updated 26 ಜನವರಿ 2022, 3:55 IST
ಅಕ್ಷರ ಗಾತ್ರ

ಸೊರಬ: ಬ್ರಹ್ಮರ್ಷಿ ನಾರಾಯಣಗುರು ವಿಚಾರ ವೇದಿಕೆಯಿಂದ ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರದೊಂದಿಗೆ ‘ಸ್ವಾಭಿಮಾನದ ನಡಿಗೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮರ್ಷಿ ನಾರಾಯಣಗುರು ವಿಚಾರ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇಇಡಗೋಡು ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಾಭಿಮಾನದ ನಡಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು
ಮಾತನಾಡಿದರು.

ನಾರಾಯಣಗುರುಗಳು ಮೇಲು, ಕೀಳಿನಿಂದ ಕೂಡಿದ್ದ ಸಮಾಜದಲ್ಲಿ ಸಮಾನತೆಯ ಹೋರಾಟ ನಡೆಸಿ ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂಬ ತತ್ವವನ್ನು ಜಗತ್ತಿಗೆ ಸಾರಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕೇರಳದಿಂದ ಕಳುಹಿಸಿದ್ದ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ರಕ್ಷಣಾ ಸಚಿವಾಲಯ ತಿರಸ್ಕರಿಸಿರುವುದು ಹಿಂದುಳಿದ ವರ್ಗಗಳಿಗೆ ಮಾಡಿದ ಅವಮಾನ. ಇದನ್ನು ಖಂಡಿಸಿ ಎಸ್‌ಎನ್‌ಜಿವಿ ಸಂಘಟನೆಯಿಂದ ಜ.26ರಂದು ಶಿವಮೊಗ್ಗದಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆ ನಡೆಯಲಿದೆ.

ಶಿವಮೊಗ್ಗದ ಗೋಪಿ ವೃತ್ತದಿಂದ, ನೆಹರೂ ರಸ್ತೆ, ಅಮೀರ್ ಅಹಮ್ಮದ್ ವೃತ್ತ, ಖಾಸಗಿ ಬಸ್ ನಿಲ್ದಾಣ ವೃತ್ತ ಮಾರ್ಗವಾಗಿ ಆರ್ಯ ಈಡಿಗರ ಭವನದವರೆಗೂ ಈಡಿಗ ಸಮಾಜ ಸೇರಿ ವಿವಿಧ ಸಂಘಟನೆಯ ಎಲ್ಲಾ ಪದಾಧಿಕಾರಿಗಳ ಸಹಕಾರದಿಂದ ಶಾಂತಿಯುತ ‘ಸ್ವಾಭಿಮಾನದ ನಡಿಗೆ’
ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ವೇದಿಕೆ ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ಬಿಳವಗೋಡು, ಸುರೇಶ್ ದುಗ್ಲಿ-ಹೊಸೂರು, ಶಿಕಾರಿಪುರ ತಾಲ್ಲೂಕು ಅಧ್ಯಕ್ಷ ಕೇಶವಮೂರ್ತಿ ಸಹಸ್ರವಳ್ಳಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚೇತನ್ ಹುಣಸೇಕಟ್ಟೆ, ಟೇಕರಾಜ್, ಸಂತೋಷ ಹರಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT