ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ನ್ಯಾಯಕ್ಕೆ ನರೇಂದ್ರ ಮೋದಿ ಒತ್ತು

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ
Last Updated 18 ಸೆಪ್ಟೆಂಬರ್ 2022, 4:23 IST
ಅಕ್ಷರ ಗಾತ್ರ

ಶಿವಮೊಗ್ಗ: ನರೇಂದ್ರ ಮೋದಿ ದೇಶದ ಪ್ರಧಾನಮಂತ್ರಿ ಆದ ನಂತರ ದೇಶದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ಹಾಗೂ ಅಗತ್ಯ ಸೇವೆಗಳನ್ನು ಒದಗಿಸುವ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ವೇಗ ನೀಡಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆರಾಜ್ಯ ಸಚಿವಎ. ನಾರಾಯಣಸ್ವಾಮಿ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಹಾಗೂ ಅಲಿಮ್ಕೋ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ನಗರದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ಅಂಗವಿಕಲರಿಗೆ ಉಚಿತವಾಗಿ ಸಾಧನ-ಸಲಕರಣೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ರೀತಿಯ ಕಾರ್ಯಕ್ರಮ ದೇಶದೆಲ್ಲೆಡೆ ಭರದಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸ್ತುತ 1020ಕ್ಕೂ ಹೆಚ್ಚಿನ ಅಂಗವಿಕಲರಿಗೆ ₹75 ಲಕ್ಷ ಮೌಲ್ಯದ ವೀಲ್‌ಚೇರ್, ಕ್ಯಾಲಿಪರ್ಸ್, ಶ್ರವಣೇಂದ್ರಿಯ, ಅಂಧರಿಗೆ ಅಗತ್ಯವಿರುವ ಬ್ಲೈಂಡ್ ಮೊಬೈಲ್ ಇತ್ಯಾದಿ ಸಾಧನ-ಸಲಕರಣೆ ಉಚಿತವಾಗಿ ವಿತರಿಸುತ್ತಿದೆ ಎಂದರು.

ಕೇಂದ್ರ ಸರ್ಕಾರ ‘ಪರ್ವತಮಾಲ’ ಎಂಬ ವಿಶೇಷ ಯೋಜನೆ ಅನುಷ್ಠಾನಗೊಳಿಸಿದ್ದರ ಪರಿಣಾಮ ಈಶಾನ್ಯ ರಾಜ್ಯಗಳಲ್ಲಿ ರಸ್ತೆ, ಆರೋಗ್ಯ, ಶಿಕ್ಷಣ ಮುಂತಾದ ಸೇವೆಗಳಲ್ಲಿ ವಿಶೇಷ ಪ್ರಗತಿ ಸಾಧಿಸಲಾಗಿದೆ
ಎಂದರು.

‘ತಮ್ಮದಲ್ಲದ ತಪ್ಪಿಗೆ ಸಂಕಷ್ಟ ಅನುಭವಿಸುತ್ತಿರುವ ಅಂಗವಿಕಲರ ನೆಮ್ಮದಿಯ ಬದುಕಿಗೆ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ದೇಹದ ಎಲ್ಲಾ ಅಂಗಾಂಗಗಳು ಸರಿಯಾಗಿದ್ದು, ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲಾಗದಿರುವ ಮನುಷ್ಯ ನಿಜವಾಗಿಯೂ ಅಂಗವಿಕಲ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ದೇಶದ 72 ಸ್ಥಳಗಳಲ್ಲಿ ಅಚರಿಸುತ್ತಿರುವ ವಿಶೇಷ ಕಾರ್ಯಕ್ರಮ ಇದು. ದಕ್ಷಿಣ ಭಾರತದಲ್ಲಿ ಏಕೈಕ ಕಾರ್ಯಕ್ರಮ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿದೆ. ಸಾರ್ವಜನಿಕ ಕ್ಷೇತ್ರದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವ ಪ್ರತಿಯೊಬ್ಬರೂ ಅಗತ್ಯವುಳ್ಳವರ ನೆರವಿಗೆ ಧಾವಿಸಬೇಕು
ಎಂದರು.

ಜಿಲ್ಲೆಯ 4.50 ಲಕ್ಷ ಜನ ಕೇಂದ್ರ ಪುರಸ್ಕೃತ ವಿವಿಧ ಯೋಜನೆಗಳ ನೇರ ಫಲಾನುಭವಿಗಳಾಗಿದ್ದಾರೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಆರ್. ರುದ್ರೇಗೌಡ, ಡಿ.ಎಸ್. ಅರುಣ್, ಅಲಿಮ್ಕೋ ಸಂಸ್ಥೆಯ ಹಿರಿಯ ಅಧಿಕಾರಿ ಅಶೋಕ್, ದತ್ತಾತ್ರಿ, ಜ್ಯೋತಿಪ್ರಕಾಶ್, ಮೇಘರಾಜ್, ಸೂಡಾ ಅಧ್ಯಕ್ಷ ನಾಗರಾಜ್, ಮಾಲತೇಶ್, ಬಳ್ಳೆಕೆರೆ ಸಂತೋಷ್, ಶಂಕರ್‌ಗನ್ನಿ, ಮಾಲತೇಶ್, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯದರ್ಶಿ ಎನ್.ಡಿ. ಪ್ರಕಾಶ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ್ ಇದ್ದರು.

ಸಂಸದ ಬಿ.ವೈ.ರಾಘವೇಂದ್ರ ಅವರ ಅವಿರತ ಶ್ರಮದಿಂದಾಗಿ ಜಿಲ್ಲೆಯ 1020ಕ್ಕೂ ಹೆಚ್ಚಿನ ಅಂಗವಿಕಲರಿಗೆ ಸಾಧನ-ಸಲಕರಣೆ ಒದಗಿಸುವ ಮಹತ್ವದ ಕಾರ್ಯಕ್ರಮ ಇದಾಗಿದೆ

ಆರ್.ರುದ್ರೇಗೌಡ, ವಿಧಾನಪರಿಷತ್ ಸದಸ್ಯ

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿವೆ. ಜನಪರ ಯೋಜನೆಗಳ ಅನುಷ್ಠಾನದಿಂದಾಗಿ ಜನಸಾಮಾನ್ಯರ ನೆಮ್ಮದಿಯ ಬದುಕು ಸಾಧ್ಯವಾಗಿದೆ.

ಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT