ಶಿವಮೊಗ್ಗ: ಅರಣ್ಯ ಸಂರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.

ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅರಣ್ಯ ಅಂದರೆ ಕೇವಲ ಮರಗಳು ಮಾತ್ರವಲ್ಲ. ಅಸಂಖ್ಯ ಜೀವ ಸಂಕುಲ ಒಳಗೊಂಡ ಜೀವವೈವಿಧ್ಯ ವ್ಯವಸ್ಥೆಯಾಗಿದೆ. ಇದರ ಸಂರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ’ ಎಂದರು.

‘ಅಂತರರಾಷ್ಟ್ರೀಯ ಸಂಪತ್ತಿನ ರಕ್ಷಣೆಯ ಕಾರ್ಯದಲ್ಲಿ ತಮ್ಮ ಜೀವ ತೆತ್ತವರನ್ನು ಸ್ಮರಿಸಬೇಕು. ಜತೆಗೆ ಪ್ರತಿಯೊಬ್ಬರೂ ಅರಣ್ಯ ಸಂರಕ್ಷಣೆಯ ಪ್ರತಿಜ್ಞೆ ಮಾಡುವುದೇ ಈ ಹುತಾತ್ಮರಿಗೆ ನೀಡಬಹುದಾದ ನಿಜವಾದ ಶ್ರದ್ಧಾಂಜಲಿ’ ಎಂದು ಹೇಳಿದರು.

‘ಗಡಿಯಲ್ಲಿ ಯೋಧರು ದೇಶ ರಕ್ಷಿಸುವ ಕಾರ್ಯ ಮಾಡಿದರೆ, ದೇಶದ ಒಳಗೆ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದಾರೆ’ ಎಂದುಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಎಸ್.ಮಾನು ಹೇಳಿದರು.

‘ಇಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳು ಹೆಚ್ಚುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಅರಣ್ಯ ಇಲಾಖೆಯ ಜವಾಬ್ದಾರಿಯೂ ಹೆಚ್ಚುತ್ತಿದೆ. ಅರಣ್ಯ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನದ್ದು. ಅರಣ್ಯ ಸಂಪತ್ತು ದೇಶದ ಸಮೃದ್ಧಿಯ ಸಂಕೇತವಾಗಿದೆ. ಮುಂದಿನ ಜನಾಂಗದ ಉತ್ತಮ ಭವಿಷ್ಯಕ್ಕೆಅರಣ್ಯ ಸಂರಕ್ಷಣೆ ಅಗತ್ಯವಾಗಿದೆ’ ಎಂದರು.

‘ಅರಣ್ಯ ಸಂರಕ್ಷಣೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಮಹನೀಯರ ಬಲಿದಾನದಿಂದ ಅರಣ್ಯ ಸಂರಕ್ಷಣೆ ಮಾಡುವ ನಮ್ಮ ಬದ್ಧತೆ ಇನ್ನಷ್ಟು ಹೆಚ್ಚಿಸುತ್ತದೆ. ಅಂತಹ ಹುತಾತ್ಮರ ಕುಟುಂಬದೊಂದಿಗೆ ಇಲಾಖೆ ಸದಾ ಇರುತ್ತದೆ. ಪ್ರತಿಯೊಬ್ಬರೂ ಅರಣ್ಯ ಸಂರಕ್ಷಣೆಗಾಗಿ ಸ್ವಯಂ ಯೋಧರಾಗಬೇಕು’ ಎಂದು ಜಿಲ್ಲಾ ವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಈ.ಶಿವಶಂಕರ್ ಕರ್ತವ್ಯದ ಸಂದರ್ಭದಲ್ಲಿ ಪ್ರಾಣ ಅರ್ಪಿಸಿದ ಸಿಬ್ಬಂದಿಯ ಪಟ್ಟಿ ವಾಚಿಸಿದರು. ಅತಿಥಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪ ಗುಚ್ಛ ಅರ್ಪಿಸಿ ಶ್ರದ್ಧಾಂಜಲಿಸಲ್ಲಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಐ.ಎಂ.ನಾಗರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.