ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗಂದೂರು ದೇವಾಲಯದಲ್ಲಿ ನವರಾತ್ರಿ ಸಂಭ್ರಮ

Last Updated 3 ಅಕ್ಟೋಬರ್ 2022, 4:55 IST
ಅಕ್ಷರ ಗಾತ್ರ

ತುಮರಿ:ಸಮೀಪದ ಸಿಗಂದೂರು ದೇವಸ್ಥಾನದಲ್ಲಿ ಭಾನುವಾರ ನವರಾತ್ರಿ ಉತ್ಸವದ ಪ್ರಯುಕ್ತ ಚೌಡೇಶ್ವರಿ ದೇವಿಗೆ ಭಾನುವಾರ ವಿಶೇಷ ಪೂಜೆಗಳು ನೆರವೇರಿದವು.

ಶರಾವತಿ ಹಿನ್ನೀರಿನ ಸಿಗಂದೂರು ದೇವಿಗೆ 7ನೇ ದಿನದ ನವರಾತ್ರಿ ಉತ್ಸವಕ್ಕೆ ಪ್ರಾತಃಕಾಲ ಪೂಜೆ ನೆರವೇರಿಸಲಾಯಿತು.

ದೇವಿಗೆ ಹಣ್ಣು, ಎಳನೀರು ಅಭಿಷೇಕ, ಚಂಡಿಕಾ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಧರ್ಮಾಧಿಕಾರಿ ಎಸ್. ರಾಮಪ್ಪ ವಿಶೇಷ ಪೂಜೆ ಸಲ್ಲಿಸಿದರು.

ಸಂಜೆ ನಡೆದ ದೀಪೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ರಾತ್ರಿ ಬ್ರಹ್ಮಲಿಂಗೇಶ್ವರ ಭಜನಾ ತಂಡದಿಂದ ಭಜನೆ ಹಾಗೂ ಸಿಗಂದೂರು ಚೌಡಮ್ಮ ದೇವಿ ಕೃಪಾಪೋಷಿತ ಯಕ್ಷಗಾನ ಮಂಡಳಿಯಿಂದ ಮಾರುತಿ ಪ್ರತಾಪ ಯಕ್ಷಗಾನ ಪ್ರದರ್ಶನ ನಡೆಯಿತು.
ಭಾನುವಾರ ರಾಜ್ಯದ ವಿವಿಧ ಭಾಗಗಳಿಂದಬಂದ ಸಾವಿರಾರು ಭಕ್ತರುಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಅ. 3ರಂದು ಸಾಲೂರು ಈಡಿಗ ಮಹಾ ಸಂಸ್ಥಾನದ ವಿಖ್ಯಾತಾನಂದ ಶ್ರೀಗಳು ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್.ಆರ್. ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT