ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಬಿಗಿ ಭದ್ರತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತೀರ್ಥಹಳ್ಳಿ ಪೊಲೀಸರು ಕರೆತಂದರು.
ತೀರ್ಥಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ನೇತೃತ್ವದಲ್ಲಿ ಕೋರ್ಟ್‌ಗೆ ಹಾಜರುಪಡಿಸಲಾಯಿತು.
ಮಾವೋವಾದಿ ನಕ್ಸಲ್ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಿ.ಜಿ.ಕೃಷ್ಣಮೂರ್ತಿ, ಸಾಕೇತ್ ರಾಜನ್ ಸಾವಿನ ಬಳಿಕ ರಾಜ್ಯದಲ್ಲಿ ನಕ್ಸಲ್ ಹೋರಾಟವನ್ನು ಮುನ್ನಡೆಸಿದ್ದರು ಎಂದು ತಿಳಿದುಬಂದಿದೆ.
ತೀರ್ಥಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಎರಡು ಹಾಗೂ ಆಗುಂಬೆ ಠಾಣೆಯ ವ್ಯಾಪ್ತಿಯಲ್ಲಿ ಮೂರು ಪ್ರಕರಣಗಳಲ್ಲಿ ಬಿ.ಜಿ.ಕೃಷ್ಣಮೂರ್ತಿ ಪ್ರಮುಖ ಆರೋಪಿಯಾಗಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬುಕ್ಕಡಿಬೈಲ್ ಗ್ರಾಮದ ನಿವಾಸಿ ಬಿ.ಜಿ.ಕೃಷ್ಣಮೂರ್ತಿ
2021ರ ನವೆಂಬರ್‌ನಲ್ಲಿ ಕೇರಳ ಪೊಲೀಸರಿಂದ ಬಂಧಿತರಾಗಿದ್ದರು.
ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಬಾಡಿ ವಾರೆಂಟ್ ಮೇಲೆ ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ಕರೆತಂದಿದ್ದ ಪೊಲೀಸರು ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.