ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನದ ಅಡಿಯಲ್ಲಿ ಬದುಕುವ ಅಗತ್ಯವಿದೆ: ಶಾಸಕ ಕುಮಾರ್ ಬಂಗಾರಪ್ಪ

Last Updated 15 ಏಪ್ರಿಲ್ 2022, 2:43 IST
ಅಕ್ಷರ ಗಾತ್ರ

ಸೊರಬ: ದೇಶಕ್ಕೆ ಸ್ವಾತಂತ್ರ್ಯ ದೊರೆತು ಏಳು ದಶಕಗಳಲ್ಲಿ ಅನೇಕ ಸುಧಾರಣೆಗಳನ್ನು ಕಾಣಲಾಗುತ್ತಿದೆ. ಸಮಾಜದಲ್ಲಿ ಸಮಾನತೆ ಪೂರ್ಣಪ್ರಮಾಣದಲ್ಲಿಮೂಡಲು ಮತ್ತಷ್ಟು ಸುಧಾರಣೆಗಳಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ಒಟ್ಟಾಗಿ ಬದುಕಬೇಕು ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.

ಗುರುವಾರ ಪಟ್ಟಣದ ಶ್ರೀರಂಗ ಕನ್ವೆನ್ಷನ್ ಹಾಲ್‍ನಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಅವರ 131ನೇ ಹಾಗೂ ಬಾಬು ಜಗಜೀವನ್‍ ರಾಂ ಅವರ 115ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಮಹಾನ್ ಚೇತನ. ಅವರು ಶಿಕ್ಷಿತರಾದ ಪರಿಣಾಮ ಸಂವಿಧಾನ ಮತ್ತು ಬದಲಾವಣೆ ಕಾಣಲು ಸಾಧ್ಯವಾಯಿತು ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಕುರಿತು ನಿವೃತ್ತ ಶಿಕ್ಷಕರಾದ ಎಂ. ನಾಗಪ್ಪ ಮತ್ತು ಡಾ. ಬಾಬು ಜಗಜೀವನ್‍ ರಾಂ ಅವರ ಕುರಿತು ರಾಜಪ್ಪ ಮಾಸ್ತರ್ ಉಪನ್ಯಾಸ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಂತರ್ಜಾತಿ ವಿವಾಹವಾದ ದಂಪತಿಗೆ ಪ್ರೋತ್ಸಾಹಧನ ವಿತರಿಸಲಾಯಿತು.

ತಹಶೀಲ್ದಾರ್ ಮಂಜುಳಾ ಹೆಗಡಾಳ್, ಪುರಸಭೆ ಅಧ್ಯಕ್ಷ ವೀರೇಶ್ ಮೇಸ್ತ್ರಿ, ಸದಸ್ಯರಾದ ಎಂ.ಡಿ. ಉಮೇಶ್, ಯು. ನಟರಾಜ್, ಪ್ರಭು, ಇಒ ಕೆ.ಜಿ. ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಪಿ.ಎಸ್. ಗಿರೀಶ್, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್. ಮಂಜುನಾಥ್, ಬಿಇಒ ನಂಜರಾಜ್,ಎಂಜಿನಿಯರ್ ಉಮಾನಾಯ್ಕ್, ರಾಮಪ್ಪ, ಪಶು ವೈದ್ಯಾಧಿಕಾರಿ ಡಾ. ಪ್ರದೀಪ್, ಮುಖಂಡರಾದ ಗುರುರಾಜ್, ಮಹೇಶ ಶಕುನವಳ್ಳಿ, ಬಂಗಾರಪ್ಪ ನಿಟ್ಟಕ್ಕಿ, ರುದ್ರಪ್ಪ ಬೈರೇಕೊಪ್ಪ, ಹರೀಶ್ ಚಿಟ್ಟೂರು, ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT