ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್, ಸಿಇಟಿ ಈ ವರ್ಷದಿಂದ ಉಚಿತ ಕೋಚಿಂಗ್: ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ
Published 21 ಜೂನ್ 2024, 16:18 IST
Last Updated 21 ಜೂನ್ 2024, 16:18 IST
ಅಕ್ಷರ ಗಾತ್ರ

ಶಿವಮೊಗ್ಗ: ನೀಟ್‌, ಸಿಇಟಿ, ಜೆಇಇ ಸೇರಿದಂತೆ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಸರ್ಕಾರದಿಂದಲೇ ಉಚಿತ ಕೋಚಿಂಗ್ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಖಾಸಗಿಯಾಗಿ ಲಕ್ಷಾಂತರ ರೂಪಾಯಿ ಕೊಟ್ಟು ಕೋಚಿಂಗ್‌ ಪಡೆಯಲು ಸಾಧ್ಯವಾಗದ ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಆಯ್ದ ಕಾಲೇಜುಗಳಲ್ಲಿ ತಜ್ಞರಿಂದ ಕೋಚಿಂಗ್ ಆರಂಭಿಸಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಇದರ ಉಪಯೋಗ ಪಡದುಕೊಳ್ಳಬಹುದು ಎಂದರು.

ರಾಜ್ಯದಲ್ಲಿ ಸುಮಾರು 1,900 ಅನಧಿಕೃತ ಶಾಲೆಗಳನ್ನು ಸರ್ಕಾರ ಗುರುತಿಸಿದೆ. ಸಂಬಂಧಿಸಿದವರಿಗೆ ನೋಟಿಸ್‌ ಕೂಡ ನೀಡಿದೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನುದಾನಿತ ಶಾಲೆಗಳಿಗೆ ನೇಮಕಾತಿ ಸಂಬಂಧ ಈಗಿರುವ ನಿರ್ಬಂಧ ಸಡಿಲಿಸಲೂ ಕ್ರಮ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪರವಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT