ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಕೊಲೆ ಆರೋಪಿಯನ್ನು ನೇಣಿಗೇರಿಸಿ: ಕೆ.ಎಸ್ ಈಶ್ವರಪ್ಪ ಆಗ್ರಹ

Published 20 ಏಪ್ರಿಲ್ 2024, 15:47 IST
Last Updated 20 ಏಪ್ರಿಲ್ 2024, 15:47 IST
ಅಕ್ಷರ ಗಾತ್ರ

ಶಿವಮೊಗ್ಗ: ‘ನಾವು ತಪ್ಪು ಮಾಡಿದರೂ ಕಾಂಗ್ರೆಸ್‌ ಸರ್ಕಾರ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯನ್ನು ಕೊಲೆ ಮಾಡಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷ್ಯದ ಉತ್ತರ ಕೊಡುತ್ತಿದೆ.  ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಕೊಲೆಗಾರನನ್ನು ನೇಣಿಗೆ ಹಾಕಬೇಕು. ಇಲ್ಲವೇ ಗುಂಡಿಟ್ಟು ಕೊಲ್ಲಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ ಈ ರೀತಿಯ ದುರ್ಘಟನೆ ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿ ಎಂಬಂತೆ ವರ್ತಿಸುತ್ತಿದೆ. ಹುಬ್ಬಳ್ಳಿಯ ನೇಹಾ ಕೊಲೆಯಿಂದ ಯಾರಿಗೆ ಹಿನ್ನಡೆಯಾಗುತ್ತದೆ. ಯಾರಿಗೆ ಮುನ್ನಡೆಯಾಗುತ್ತದೆ ಎಂಬ ರಾಜಕಾರಣ ನಾನು ಮಾಡಲ್ಲ’ ಎಂದರು.

ರಾಷ್ಟ್ರಭಕ್ತರ ಬಳಗದಿಂದ ಪ್ರತಿಭಟನೆ
ನಾಳೆ ಹುಬ್ಬಳ್ಳಿಯಲ್ಲಿ ಹಿಂದು ಯುವತಿ ಕೊಲೆ ಸೇರಿದಂತೆ ಬೆಂಗಳೂರು ಚನ್ನಗಿರಿಯಲ್ಲಿ ಹಲ್ಲೆ ಪ್ರಕರಣಗಳ ಖಂಡಿಸಿ ರಾಷ್ಟ್ರಭಕ್ತರ ಬಳಗದಿಂದ ಏ.22ರಂದು ಬೆಳಿಗ್ಗೆ 10ಕ್ಕೆ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕೆ.ಎಸ್‌.ಈಶ್ವರಪ್ಪ ತಿಳಿಸಿದರು. ಅಂದು ದೈವಜ್ಞ ಕಲ್ಯಾಣ ಮಂದಿರದಿಂದ ಆರಂಭವಾಗುವ ಪ್ರತಿಭಟನೆ ಮೆರವಣಿಗೆ ದುರ್ಗಿಗುಡಿ ಸೀನಪ್ಪ ಶೆಟ್ಟಿ (ಗೋಪಿ ವೃತ್ತ) ವೃತ್ತ ಬಾಲರಾಜ್‌ ಅರಸ್‌ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ ಎಂದರು. ನಮ್ಮ ಪ್ರತಿಭಟನೆಗೆ ಜಿಲ್ಲಾಡಳಿತ ಅನುಮತಿ ಕೊಡದಿದ್ದರೂ ಮಾಡುತ್ತೇವೆ. ಅವರು ಬೇಕಾದರೆ ನಮ್ಮನ್ನು ಬಂಧಿಸಲಿ. ಹಿಂದುಗಳಿಗೆ ಅನ್ಯಾಯ ಆದಾಗ ನೋಡಿಕೊಂಡು ಸುಮ್ಮನೆ ಕೂರುವ ಮನುಷ್ಯ ನಾನಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT