ಹಾಸ್ಟೆಲ್ ಪ್ರವೇಶಕ್ಕೆ ದಿನೇದಿನೇ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಇತರೆ ವಿದ್ಯಾರ್ಥಿಗಳ ಪ್ರವೇಶಕ್ಕೂ ಅವಕಾಶ ಒದಗಿಸಬೇಕು
ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗ ಶಾಸಕ
ಶೈಕ್ಷಣಿಕ ಸಾಲಿನ ಮುಕ್ತಾಯದ ಸಂದರ್ಭದಲ್ಲಿ ಹಾಸ್ಟೆಲ್‌ಗಳ ನಿರ್ವಹಣಾ ಕಾರ್ಯ ಸ್ಥಗಿತಗೊಳ್ಳುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ. ಆ ಲೋಪ ಸರಿಪಡಿಸಿ
ಡಾ. ಧನಂಜಯ ಸರ್ಜಿ ವಿಧಾನ ಪರಿಷತ್ ಸದಸ್ಯ
ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಊಟೋಪಹಾರದಲ್ಲಿ ಗುಣಮಟ್ಟದ ಕೊರತೆ ಇರುವ ಬಗ್ಗೆ ಆಗಾಗ್ಗೆ ದೂರುಗಳ ಕೇಳಿ ಬರುತ್ತಿವೆ. ಸಂಬಂಧಿಸಿದ ಅಧಿಕಾರಿಗಳು ಗುಣಮಟ್ಟದ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಬೇಕು
ಬೇಳೂರು ಗೋಪಾಲಕೃಷ್ಣ ಸಾಗರ ಶಾಸಕ
ವಾದಿ-ಎ-ಹುದಾ ಲಷ್ಕರ್‌ಮೊಹಲ್ಲಾ ಆರ್.ಎಂ.ಎಲ್. ನಗರ ಸೇರಿದಂತೆ ಅಲ್ಪಸಂಖ್ಯಾತರು ವಾಸಿಸುವ ಬಡಾವಣೆಗಳಲ್ಲಿ ಮೂಲ ಸೌಕರ್ಯ ಕೊರತೆಯಿದ್ದು ಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳಬೇಕು
ಬಲ್ಕೀಶ್ ಬಾನು ವಿಧಾನ ಪರಿಷತ್ ಸದಸ್ಯೆ
ಹಾಸ್ಟೆಲ್‌ಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ನೀಡಿದರೆ ಹೇಗೆ? ಪರ ಊರುಗಳ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಿ