ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಮರು ಪರೀಕ್ಷೆ ಆದೇಶ ರದ್ದತಿಗೆ ಆಗ್ರಹ

Last Updated 11 ಮೇ 2022, 4:08 IST
ಅಕ್ಷರ ಗಾತ್ರ

ಸಾಗರ: ಪಿಎಸ್‌ಐ ನೇಮಕಾತಿ ಹಗರಣದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನೀಡಿರುವ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ರೈತ ಸಂಘ ಹಾಗೂ ಮಲ್ನಾಡ್ ಸೋಲ್ಜರ್ ಕೋಚಿಂಗ್ ಸೆಂಟರ್‌ನ ಪ್ರಮುಖರು ಮಂಗಳವಾರ ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಭೂಸೇನೆ ನೇಮಕಕ್ಕೆ ಸಂಬಂಧಪಟ್ಟಂತೆ ಬಾಕಿ ಇರುವ ಲಿಖಿತ ಪರೀಕ್ಷೆಯನ್ನು ಕೂಡಲೇ ನಡೆಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಬಹಿರಂಗ ಸಭೆಯಲ್ಲಿ ಮಾತನಾಡಿದ ರೈತ ಸಂಘದ ತಾಲ್ಲೂಕು ಅಧ್ಯಕ್ಷ ದಿನೇಶ್ ಶಿರವಾಳ, ‘ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿರುವುದು ಅವೈಜ್ಞಾನಿಕ ನಡೆಯಾಗಿದೆ. ಭ್ರಷ್ಟಾಚಾರ ಎಸಗಿದವರಿಗೆ ಶಿಕ್ಷೆ ಒದಗಿಸುವುದು ಸರ್ಕಾರದ ಕರ್ತವ್ಯ. ಅದರ ಬದಲು ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿ ಆಯ್ಕೆಯಾದವರು ಮತ್ತೆ ಪರೀಕ್ಷೆ ಬರೆಯಬೇಕು ಎಂದು ಹೇಳುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಕೆಎಎಸ್ ಪರೀಕ್ಷೆ ನಡೆದು ಒಂದೂವರೆ ವರ್ಷವಾದರೂ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳನ್ನು ಕರೆದಿಲ್ಲ. ಎಫ್‌ಡಿಎ ಹುದ್ದೆ ತಾತ್ಕಾಲಿಕ ಪಟ್ಟಿ ಪ್ರಕಟವಾಗಿದ್ದು, ಅದರಲ್ಲೂ ಭ್ರಷ್ಟಾಚಾರ ನಡೆದಿರುವ ಶಂಕೆ ಇದೆ. ರಾಜ್ಯ ಸರ್ಕಾರ ಸರ್ಕಾರಿ ಹುದ್ದೆಗಳನ್ನು ಮಾರಾಟಕ್ಕೆ ಇಟ್ಟಿರುವಂತೆ ಕಾಣುತ್ತಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಸಂಚಾಲಕ ರಮೇಶ್ ಕೆಳದಿ, ಪ್ರಮುಖರಾದ ಸೂರಜ್, ಹೊಯ್ಸಳ ಗಣಪತಿಯಪ್ಪ, ಸುರೇಶ್ ಬೆಳಂದೂರು, ವಿಜಯ್ ಯಲಕುಂದ್ಲಿ, ರಮಾಕಾಂತ್ ಕೆಳದಿ, ಕುಮಾರ ಗೌಡ, ಕಿಶೋರ್, ಸುಭಾಶ್ಚಂದ್ರ ತೇಜಸ್ವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT