ಶಿವಮೊಗ್ಗ: ದಲಿತ ದಂಪತಿಗಳಿಗೆ ಹಲ್ಲೆ ಮಾಡಿ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ತೀರ್ಥಹಳ್ಳಿ ತಾಲ್ಲೂಕಿನ ಆರಗ ಅಗ್ರಹಾರದಲ್ಲಿ ದಲಿತ ದಂಪತಿಯನ್ನು ಅಡ್ಡಗಟ್ಟಿ ದೇವರಗುಡಿ ನಿವಾಸಿಗಳಾದ ಸಂಪತ್, ಆದರ್ಶ ಮುಂತಾದವರು ಸೇರಿ ಹಲ್ಲೆ ನಡೆಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮಹಿಳೆ ಜೋರಾಗಿ ಕೂಗಿಕೊಂಡಿದ್ದರಿಂದ ಅವರ ಪತಿಗೂ ಎಚ್ಚರವಾಗಿ ಸಹಾಯಕ್ಕೆ ಕರೆದಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಓಡಿ ಹೋಗಿದ್ದಾರೆ ಎಂದು ಪ್ರತಿಭಟನಕಾರರು ತಿಳಿಸಿದ್ದಾರೆ.

ದಂಪತಿಗಳು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. ನೊಂದ ದಲಿತ ದಂಪತಿಗೆ ನ್ಯಾಯ ಸಿಗಬೇಕು. ಸಂತ್ರಸ್ತರಿಗೆ ₹ 25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಹಾಲೇಶಪ್ಪ, ಶಿವಕುಮಾರ್, ಮಂಜುನಾಥ್, ಶೇಷಪ್ಪ, ಪರಮೇಶ್ ಸೂಗೂರು, ಜಗ್ಗು, ರುದ್ರಮ್ಮ ರಂಗಸ್ವಾಮಿ, ಕಿಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.