ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯಭೂಮಿ ಸಾಗುವಳಿ ಸಮಸ್ಯೆ ಪರಿಹರಿಸಲು ಬಿಎಸ್‌ವೈ, ರಾಘವೇಂದ್ರ ವಿಫಲ

ತೀ.ನ. ಶ್ರೀನಿವಾಸ್ ಆರೋಪ
Last Updated 3 ಡಿಸೆಂಬರ್ 2022, 6:04 IST
ಅಕ್ಷರ ಗಾತ್ರ

ಸಾಗರ: ಜಿಲ್ಲೆಯ ಅರಣ್ಯಭೂಮಿ ಸಾಗುವಳಿದಾರರ ಸಮಸ್ಯೆಯನ್ನು ಬಗೆಹರಿಸುವಲ್ಲಿ 2008ರಿಂದ ಈವರೆಗೂ ವಿವಿಧ ಹುದ್ದೆಯಲ್ಲಿರುವ ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ರಾಘವೇಂದ್ರ ವಿಫಲರಾಗಿದ್ದಾರೆ ಎಂದು ಮಲೆನಾಡು ಭೂ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ಆರೋಪಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ 90 ಸಾವಿರ ಮಂದಿ ಅರಣ್ಯಭೂಮಿ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ಪಡೆಯಲು ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಶಿಕಾರಿಪುರ ತಾಲ್ಲೂಕಿನಲ್ಲೇ 25 ಸಾವಿರ ಅರ್ಜಿದಾರರಿದ್ದಾರೆ. ಆದರೆ, ಹಲವು ವರ್ಷಗಳಿಂದ ಅರ್ಜಿದಾರರ ನಿರೀಕ್ಷೆ ಈಡೇರಿಲ್ಲ ಎಂದು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.

ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಿ.ವೈ. ರಾಘವೇಂದ್ರ ಅವರು ಸಂಸದರಾಗಿದ್ದಾರೆ. ಆದಾಗ್ಯೂ ಅರಣ್ಯಭೂಮಿ ಹಕ್ಕು ಕಾಯ್ದೆಗೆ ಅಗತ್ಯ ತಿದ್ದುಪಡಿ ತರುವ ವಿಷಯದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ಜಿಲ್ಲೆಯಲ್ಲಿ ಅರಣ್ಯಭೂಮಿ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ಪಡೆಯಲು ಸಲ್ಲಿಕೆಯಾಗಿರುವ ಅರ್ಜಿಗಳನ್ನು ಅಧಿಕಾರಿಗಳು ವಜಾ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರು ಈ ವಿಷಯದಲ್ಲಿ ಮೌನ ವಹಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕ ಹಾಲಪ್ಪ ಅವರು ತಾವು ಶಾಸಕರು ಎಂಬುದನ್ನು ಮರೆತಂತೆ ವರ್ತಿಸುತ್ತಿದ್ದಾರೆ. ಎಂಎಸ್‌ಐಎಲ್ ಅಧ್ಯಕ್ಷರಾಗಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಟೀಕಿಸಿದರು.

ಪ್ರಮುಖರಾದ ಧರ್ಮೇಂದ್ರ ಶಿರವಾಳ, ಪ್ರೇಮ್ ಸಿಂಗ್, ಶ್ರೀಧರ ನಾರಗೋಡು, ರಂಗನಾಥ್, ಆದಿ ಸಾಗರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT