ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೆಡಿಎಸ್ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಲು ಶ್ರಮಿಸಿ

ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಗೀತಾ ಸತೀಶ್ ಚಾಲನೆ
Published : 12 ಸೆಪ್ಟೆಂಬರ್ 2024, 14:26 IST
Last Updated : 12 ಸೆಪ್ಟೆಂಬರ್ 2024, 14:26 IST
ಫಾಲೋ ಮಾಡಿ
Comments

ಶಿಕಾರಿಪುರ: ಜೆಡಿಎಸ್ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಜೆಡಿಎಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಗೀತಾ ಸತೀಶ್ ತಿಳಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಕ್ಷದ ಬಲವರ್ಧನೆಗಾಗಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನಲ್ಲಿ 5,000 ಸದಸ್ಯತ್ವ ಮಾಡಿಸುವ ಗುರಿ ಹೊಂದಲಾಗಿದೆ. ಬಿಜೆಪಿ–ಜೆಡಿಎಸ್ ಮೈತ್ರಿ ಇದ್ದರೂ ನಮ್ಮ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸುವುದು ಪ್ರತಿಯೊಬ್ಬ ಕಾರ್ಯಕರ್ತರ ಜವಾಬ್ದಾರಿ ಎಂದರು.

ಸದಸ್ಯತ್ವ ಅಭಿಯಾನ ಮೂಲಕ ತಾಲ್ಲೂಕಿನಲ್ಲಿ ಪಕ್ಷ ಸಂಘಟನೆಗಾಗಿ ಆದ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಜೆಡಿಎಸ್ ಕಚೇರಿ ಆರಂಭಿಸಲಾಗುತ್ತದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಹಾಕುವಂತೆ ಚರ್ಚೆ ನಡೆಸಲಾಗುತ್ತದೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬೆಂಕಿ ಯೋಗೀಶ್ ತಿಳಿಸಿದರು.

ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ವಿ. ರಾಜಮ್ಮ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಶಿಕಾರಿಪುರ ಉಸ್ತುವಾರಿ ಸಂಗಯ್ಯ, ಹಿರಿಯ ಮುಖಂಡ ಆರ್. ಜಯಣ್ಣ, ಜಿಲ್ಲಾ ಎಸ್ಸಿ ಎಸ್ಟಿ ವಿಭಾಗದ ಅಧ್ಯಕ್ಷೆ ಉಷಾ ನಾಯ್ಕ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಬಿ. ಸರೋಜಮ್ಮ, ಸಾವಿತ್ರಿ ಮಂಜುನಾಥ್, ಒಬಿಸಿ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಹಳ್ಳೂರು, ನಗರ ಯುವ ಘಟಕದ ಅಧ್ಯಕ್ಷ ಮಂಜುನಾಥ್, ಅಲ್ಲಸಂಖ್ಯಾತರ ಘಟಕದ ಉಪಾಧ್ಯಕ್ಷೆ ನಸ್ರೀನ್, ರೈತ ವಿಭಾಗದ ಉಮೇಶ್, ಪ್ರಧಾನ ಕಾರ್ಯದರ್ಶಿ ರಾಮು, ಪದಾಧಿಕಾರಿ ಕವಿತಾ ಪ್ರದೀಪ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT