ಶಿಕಾರಿಪುರ: ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಶಾಸಕ ಬಿ.ವೈ. ವಿಜಯೇಂದ್ರ ಸೂಚಿಸಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ಗುರುವಾರ ನಡೆದ ಮೆಸ್ಕಾಂ ಅಧಿಕಾರಿಗಳ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಮಳೆ ಕೈ ಕೊಟ್ಟಿದ್ದರಿಂದ ಬೆಳೆ ನಷ್ವಾಗುವ ಆತಂಕದಲ್ಲಿ ರೈತರು ಇದ್ದಾರೆ. ಬೆಳೆಗಳಿಗೆ ಪಂಪ್‌ಸೆಟ್ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ವಿದ್ಯುತ್ ಸರಬರಾಜು ಮಾಡದಿದ್ದರೆ ಬೆಳೆ ಸಂಪೂರ್ಣ ಹಾಳಾಗುವ ಸಾಧ್ಯತೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಸೂಚಿಸಿದರು.
ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ‘ರೈತರ ಬೋರ್‌ವೆಲ್‌ಗಳಿಗೆ 6ರಿಂದ 7 ತಾಸು ನಿರಂತರ ವಿದ್ಯುತ್ ಹಾಗೂ ಏತ ನೀರಾವರಿ ಯೋಜನೆಗೆ ಸಮರ್ಪಕ ವಿದ್ಯುತ್ ನೀಡಬೇಕು’ ಎಂದರು.
ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಇಂದೂಧರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.