ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತೀರ್ಪಿನಿಂದ ಸಿದ್ದರಾಮಯ್ಯ ಅಹಂಕಾರಕ್ಕೆ ಪೆಟ್ಟು

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಲಪ್ಪ ಹರತಾಳು ಹೇಳಿಕೆ
Published : 24 ಸೆಪ್ಟೆಂಬರ್ 2024, 15:27 IST
Last Updated : 24 ಸೆಪ್ಟೆಂಬರ್ 2024, 15:27 IST
ಫಾಲೋ ಮಾಡಿ
Comments

ಸಾಗರ: ಮೂಡಾ ಹಗರಣದ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ನೀಡಿರುವ ತೀರ್ಪಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಂಕಾರಕ್ಕೆ ಸರಿಯಾದ ಪೆಟ್ಟು ಬಿದ್ದಂತಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಲಪ್ಪ ಹರತಾಳು ಟೀಕಿಸಿದರು.

ಇಲ್ಲಿನ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಾಯಿಸಿ ಮಂಗಳವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರಿಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಲಿ. ಅವರು ರಾಜಿನಾಮೆ ನೀಡುವವರೆಗೂ ಬಿಜೆಪಿ ವಿಶ್ರಮಿಸುವುದಿಲ್ಲ ಎಂದರು.

ಬಿಜೆಪಿಯ ಪ್ರಮುಖರಾದ ಟಿ.ಡಿ.ಮೇಘರಾಜ್, ಡಾ.ರಾಜನಂದಿನಿ ಕಾಗೋಡು, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ಕೆ.ಎಸ್.ಪ್ರಶಾಂತ್, ಸಂತೋಷ್ ಆರ್.ಶೇಟ್, ಶ್ರೀನಿವಾಸ್ ಮೇಸ್ತ್ರಿ, ಸುಧಾಕರ್, ಹರಿಕೃಷ್ಣ, ಸತೀಶ್ ಕೆ. ಗಿರಿಗೌಡ, ಮೈತ್ರಿ ಪಾಟೀಲ್, ಕೆ.ವಿ.ಪ್ರವೀಣ್, ಶ್ರೀರಾಮ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT