ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಳಲಗದ್ದೆ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಪ್ರಶಸ್ತಿ

Published : 12 ಸೆಪ್ಟೆಂಬರ್ 2024, 14:29 IST
Last Updated : 12 ಸೆಪ್ಟೆಂಬರ್ 2024, 14:29 IST
ಫಾಲೋ ಮಾಡಿ
Comments

ಸೊರಬ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕಿನಂದ ನೀಡುವ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ತಾಲ್ಲೂಕಿನ ಮಳಲಗದ್ದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ ನೀಡಲಾಗಿದೆ. 

ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕಿನ ವಾರ್ಷಿಕ ಸಭೆಯಲ್ಲಿ ಮಳಲಗದ್ದೆ ಸಹಕಾರ ಸಂಘದ ಅಧ್ಯಕ್ಷ ಎಂ.ಆರ್.ಅಶೋಕ ಹೆಗಡೆ ಮತ್ತು ಕಾರ್ಯದರ್ಶಿ ಎಚ್.ಎಂ.ವಿನಯ್ ಅವರನ್ನು ಗೌರವಿಸಲಾಯಿತು.

ಸಹಕಾರ ಸಂಘದ ಅಧ್ಯಕ್ಷ ಹಾಗೂ ಸದಸ್ಯರ ಸಂಘಟನ್ಮಾಕ ಚಟುವಟಿಕೆ ಮತ್ತು ಶ್ರಮದ ಫಲವಾಗಿ ಮಳಲಗದ್ದೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಮುಚೂಣಿಗೆ ಬಂದಿರುವುದು ಹೆಮ್ಮಯ ಸಂಗತಿ ಎಂದು ಸದಸ್ಯರು ಮತ್ತು ಷೇರುದಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ನಿದೇರ್ಶಕರಾದ ಗೋಪಲಕೃಷ್ಣ ಬೇಳೂರು, ಬಸವಾನಿ ವಿಜಯದೇವ್, ಕೆ.ಪಿ. ದುಗ್ಗಪ್ಪಗೌಡ, ಎಂ.ಎ. ಪರಮೇಶ್, ಜಿ.ಎಸ್. ಸುಧೀರ್, ಕೆ.ಪಿ. ರುದ್ರಗೌಡ, ಮಂಜಪ್ಪ, ಶಿವಶಂಕರಪ್ಪ, ಮಹಾಲಿಂಗಯ್ಯ, ನಾಗಭೂಷಣ, ಅನ್ನಪೂರ್ಣ ಜಿಲ್ಲಾ ಹಾಪ್ ಕಾಮ್ಸ್‌ ಅಧ್ಯಕ್ಷ ಕೆ.ವಿ. ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT