ತೀರ್ಥಹಳ್ಳಿ: ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರ ಪ್ರಯೋಜನ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಸವಾನಿ ಕೆನರಾ ಬ್ಯಾಂಕ್ ಪ್ರಬಂಧಕ ಸಂತ್ಯೇಂದ್ರ ಕಾಮತ್ ತಿಳಿಸಿದರು.
ಸೆಲ್ಕೊ ಸೋಲಾರ್ ಸಂಸ್ಥೆಯು ಬಸವಾನಿಯಲ್ಲಿ ಆಯೋಜಿಸಿದ್ದ ಹೊಲಿಗೆ ಉಚಿತ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬಹುದು. ಬ್ಯಾಂಕ್ ವತಿಯಿಂದ ಮಹಿಳೆಯರಿಗಾಗಿ ವಿಶೇಷ ಸಾಲ ಸೌಲಭ್ಯ ಒದಗಿಸಲಾತ್ತಿದೆ ಎಂದು ಮಾಹಿತಿ ನೀಡಿದರು.