ಶನಿವಾರ, ಏಪ್ರಿಲ್ 1, 2023
25 °C

ಕಾರ್ಗಲ್: ಜೋಗ ಜಲಪಾತ ದರ್ಶನಕ್ಕೆ ಬೇಕಿಲ್ಲ ಕೋವಿಡ್ ನೆಗೆಟಿವ್ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಗಲ್: ‘ಪ್ರವಾಸಿಗರು ವಿಶ್ವವಿಖ್ಯಾತ ಜೋಗ ಜಲಪಾತ ನೋಡಲು ಕೋವಿಡ್ ನೆಗಟಿವ್ ದೃಢೀಕರಣ ಪತ್ರ ಹಾಜರುಪಡಿಸಬೇಕಿಲ್ಲ’ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಎಚ್.ಎಸ್.ರಾಮಕೃಷ್ಣ ತಿಳಿಸಿದರು.

ಕೋವಿಡ್ ನಿರ್ಬಂಧದ ಕಾರಣ ಜೋಗದಲ್ಲಿ ಪ್ರವಾಸಿಗರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲು ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಅವರು ಮಾಹಿತಿ ನೀಡಿದರು.

‘ಜಲಪಾತ ದರ್ಶನಕ್ಕೆ ಬರುವ ಪ್ರವಾಸಿಗರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡಿರಬೇಕು. ಈ ಬಗ್ಗೆ ಪ್ರಾಧಿಕಾರದ ಪ್ರಧಾನ ದ್ವಾರದಲ್ಲಿ ಪರಿಶೀಲಿಸಲಾಗುವುದು. ಕನಿಷ್ಠ, ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿರಲೇಬೇಕು. ಇಲ್ಲದಿದ್ದಲ್ಲಿ ಅವರಿಗೆ ಲಸಿಕೆಯ ಮಹತ್ವವನ್ನು ತಿಳಿಸಿಕೊಡಲಾಗುವುದು’ ಎಂದು ತಿಳಿಸಿದರು.

ಜೋಗದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರವು ಉನ್ನತ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸುತ್ತಿದೆ. ಶೀಘ್ರವೇ ನೂತನ ಯೋಜನೆಗಳ ಕಾಮಗಾರಿಗಳಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು