ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಗಸೂಚಿ ‍ಪಾಲನೆಗೆ ನೋಡಲ್‌ ಶಿಕ್ಷಕರು

ಇಂದಿನಿಂದ 1ರಿಂದ 5ನೇ ತರಗತಿ ಆರಂಭ: ಇಲಾಖೆಯಿಂದ ಸಕಲ ಸಿದ್ಧತೆ
Last Updated 25 ಅಕ್ಟೋಬರ್ 2021, 4:13 IST
ಅಕ್ಷರ ಗಾತ್ರ

ಶಿವಮೊಗ್ಗ: ಕೊರೊನಾ ಕಾರಣ ಮುಚ್ಚಿದ್ದ 1ರಿಂದ 5ನೇ ತರಗತಿಗಳು ಸೋಮವಾರದಿಂದ ಆರಂಭಗೊಳ್ಳುತ್ತಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಕೊರೊನಾ ಮಾರ್ಗಸೂಚನೆ ಪಾಲನೆಗೆ ಪ್ರತಿ ಶಾಲೆಯಲ್ಲಿಯೂ ಒಬ್ಬ ನೋಡಲ್‌ ಶಿಕ್ಷಕರನ್ನು ನೇಮಕಮಾಡಲಾಗಿದೆ.

ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಸೇರಿ 969 ಕಿರಿಯ ಪ್ರಾಥಮಿಕ ಶಾಲೆಗಳಿದ್ದು, 1,26,500 ಮಕ್ಕಳಿದ್ದಾರೆ. 1346 ಹಿರಿಯ ಪ್ರಾಥಮಿಕ ಶಾಲೆಗಳಿದ್ದು, 1,71,500 ಮಕ್ಕಳಿದ್ದಾರೆ. ಇಂದಿನಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ಇಡಲು ಪ್ರತಿ 10 ಮಕ್ಕಳಿಗೆ ಒಬ್ಬರು ಮೆಂಟರ್‌ ಶಿಕ್ಷಕರನ್ನು ನೇಮಿಸಲಾಗಿದೆ. ಇದನ್ನು ಹೊರತುಪಡಿಸಿ ಕೊರೊನಾ ಮಾರ್ಗಸೂಚಿಯನ್ನು ಪಾಲನೆಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಶಿಕ್ಷಕರಿಗೆ ವಹಿಸಲಾಗಿದೆ. ಇವರು ಶಾಲೆಗೆ ಬರುವ ಪ್ರತಿಯೊಬ್ಬ ವಿದ್ಯಾರ್ಥಿಯ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸುವುದು ಹಾಗೂ ಸ್ಯಾನಿಟೈಸರ್‌, ಮಾಸ್ಕ್‌ ಧಾರಣೆ, ಬಿಸಿಯೂಟ,
ಸ್ವಚ್ಛತೆ ಸೇರಿ ಸರ್ಕಾರ ಸೂಚಿಸಿರುವ ಕೊರೊನಾ ಮಾರ್ಗಸೂಚಿಗಳ ಪಾಲನೆಯ ಜವಾಬ್ದಾರಿಯನ್ನುನಿಭಾಯಿಸಲಿದ್ದಾರೆ.

‌ನ.2ರಿಂದ ಪೂರ್ಣದಿನ ಶಾಲೆ: ಅ. 30ರವರೆಗೆ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಲ್ಲಿ ಅರ್ಧ ದಿನ ಮಾತ್ರ ಭೌತಿಕ ತರಗತಿಗಳು ನಡೆಯಲಿವೆ. ನ. 2ರಿಂದ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯಲಿದ್ದು, ಅಂದಿನಿಂದ ಮಧ್ಯಾಹ್ನದ ಬಿಸಿಯೂಟ ನೀಡಲಾಗುವುದು. ಅಲ್ಲಿಯವರೆಗೆ ಶಾಲೆಗಳಲ್ಲಿ ಬಿಸಿ ನೀರಿನ ವ್ಯವಸ್ಥೆಯಷ್ಟೇ ಮಾಡಲಾಗುವುದು ಎಂದುಡಿಡಿಪಿಐ ಎನ್.ಎಂ. ರಮೇಶ್‌ ಮಾಹಿತಿ ನೀಡಿದರು.

ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ: ಶಾಲೆ ಆರಂಭದ ಕಾರಣ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯಗೊಳಿಸಲಾಗಿದೆ. ಕೊರೊನಾ ಲಕ್ಷಣಗಳಿರುವ ಮಕ್ಕಳಿಗೆ ಹಾಜರಾತಿ ಕಡ್ಡಾಯವಿಲ್ಲ. ಹೀಗಾಗಿ, ಪೋಷಕರ ಒಪ್ಪಿಗೆ ಪಡೆದುಕೊಂಡೇ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಬರಮಾಡಿಕೊಳ್ಳಲಾಗುವುದು. ಈ ಬಗ್ಗೆ ಎಲ್ಲ ಶಾಲೆಯಲ್ಲೂ ಪೋಷಕರ ಸಭೆ ನಡೆಸಲಾಗಿದೆ. ಆರೋಗ್ಯ ಸರಿ ಇಲ್ಲದ ಮಕ್ಕಳು ಸುಧಾರಣೆ ನಂತರ ಶಾಲೆಗೆ ಬರುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಒಂದು ಕೊಠಡಿಗೆ 20 ಮಕ್ಕಳು: ಕೊರೊನಾ ಮಧ್ಯೆ ಶಾಲೆ ಆರಂಭವಾಗುತ್ತಿರುವುದರಿಂದ ಮಕ್ಕಳ ಆರೋಗ್ಯ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. ಅಂತರ ಕಾಯ್ದುಕೊಂಡು ಪಾಠ ಬೋಧನೆಗೆ ಅನುಕೂಲ ಮಾಡಿಕೊಡಲಾಗುವುದು. ಒಂದು ಕೊಠಡಿಗೆ 20 ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಲು ವ್ಯವಸ್ಥೆ ಮಾಡಿ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಮಕ್ಕಳಿಗೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. 50 ವರ್ಷ ದಾಟಿದ ಶಿಕ್ಷರಿಗೆ ಫೇಸ್‌ಶೀಲ್ಡ್‌ ಹಾಕಿಕೊಳ್ಳುವಂತೆ ಸೂಚನೆ ನೀಡಲಾಗಿದೆ.ಶಿಕ್ಷಕರು, ಮಕ್ಕಳ ನಡುವೆ ಅಂತರ ಕಾಯ್ದುಕೊಂಡು ಪಾಠಬೋಧನೆಗೆ ಅವಕಾಶ ನೀಡಲಾಗಿದೆ ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್‌ ಮಾಹಿತಿ
ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT