ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆ

Last Updated 4 ಸೆಪ್ಟೆಂಬರ್ 2020, 20:19 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ ಹಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿ 1.2 ಸೆಂ.ಮೀ, ಆಗುಂಬೆಯಲ್ಲಿ 1.4 ಮಿ.ಮೀ ಮಳೆಯಾಗಿದೆ.

ಕೋಣಂದೂರು, ಹೊಸನಗರ, ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಿದ್ದು, ಭದ್ರಾವತಿ, ಸಾಗರ, ಸೊರಬ, ಶಿಕಾರಿಪುರದಲ್ಲಿ ಸಾಧಾರಣ ಮಳೆಯಾಗಿದೆ.

ತೀರ್ಥಹಳ್ಳಿಯಲ್ಲಿ ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯದ ನೀರಿನ ಮಟ್ಟ ಹೆಚ್ಚಿದೆ. 12 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಅಷ್ಟೇ ಪ್ರಮಾಣದ ನೀರು ಹೊರಕ್ಕೆ ಬಿಡಲಾಗುತ್ತಿದೆ. 186 ಅಡಿ ನೀರು ಸಂಗ್ರಹ ಸಾಮರ್ಥ್ಯದ ಭದ್ರಾ ಜಲಾಶಯ ನೀರಿನ ಮಟ್ಟ 183.30 ಅಡಿಗೆ ತಲುಪಿದೆ.

ಚಿತ್ರದುರ್ಗದ ಹೊಸದುರ್ಗ, ಮೊಳಕಾಲ್ಮುರಿನಲ್ಲಿ ಹದ ಮಳೆಯಾಗಿದ್ದು, 13 ವರ್ಷಗಳ ನಂತರ ಪಕ್ಕುರ್ತಿ ಕೆರೆ ಕೋಡಿ ಬಿದ್ದಿದೆ. ನಾಯಕನಹಟ್ಟಿಯಲ್ಲಿ ತುಂತುರು ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಕೆಲವೆಡೆ ಉತ್ತಮ ಮಳೆಯಾಗಿದೆ. ಕೆರೆ, ಕಟ್ಟೆ, ಹೊಂಡಗಳು ಭರ್ತಿಯಾಗಿದ್ದು, ಕೃಷಿಗೆ ನೆರವಾಗಿವೆ.

ದಾವಣಗೆರೆ ನಗರ ಸೇರಿ ಸಾಸ್ವೆಹಳ್ಳಿ, ತ್ಯಾವಣಗಿ, ಬಸವಾ‍ಪಟ್ಟಣಗಳಲ್ಲಿ ಶುಕ್ರವಾರ ಮಧ್ಯಾಹ್ನ ಬಿರುಸಿನ ಮಳೆಯಾಗಿದೆ. ಹರಿಹರ ತಾಲ್ಲೂಕಿನ ಮಲೇಬೆನ್ನೂರು ಸಮೀಪ ಸಂಕ್ಲಿಪುರದಲ್ಲಿ 60 ಎಕರೆ ಭತ್ತದ ಗದ್ದೆಗಳು ಮುಳುಗಡೆಯಾಗಿದ್ದು, ಸಂಕ್ಲಿಪುರದಿಂದ ಮುಕ್ತೇನಹಳ್ಳಿ ಹೋಗುವ ಸಂಪರ್ಕ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು ಸಂಪರ್ಕ ಕಡಿತವಾಗಿದೆ. ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT