ಮುಖ್ಯಮಂತ್ರಿ ಮನೆಗೆ ಎನ್ಎಸ್ಯುಐ ಮುತ್ತಿಗೆ: ಬಂಧನ

ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಹೆಚ್ಚಳದ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಇಟಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿ ಎನ್ಎಸ್ಯುಐ ಕಾರ್ಯಕರ್ತರು ವಿನೋಬ ನಗರದಲ್ಲಿನ ಮುಖ್ಯಮಂತ್ರಿ ನಿವಾಸಕ್ಕೆ ಶನಿವಾರ ಮುತ್ತಿಗೆ ಹಾಕಲು ಯತ್ನಿಸಿದರು.
ಪಿಪಿಇ ಕಿಟ್ ಧರಿಸಿ ಮುತ್ತಿಗೆ ಹಾಕಲು ಯತ್ನಿಸಿದ ಸಂಘಟನೆಯ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ವ್ಯಾನ್ನಲ್ಲಿ ಕರೆದುಕೊಂಡು ಹೋದರು.
ರಾಜ್ಯದ ಪ್ರಸಕ್ತ ಪರಿಸ್ಥಿತಿಯಲ್ಲಿ ಸಿಇಟಿ, ಪದವಿ ಪರೀಕ್ಷೆಗಳನ್ನು ನಡೆಸಬಾರದು. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಪರೀಕ್ಷೆ ನಡೆಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲಿಸಬೇಕು. ಸಿಇಟಿ ಪರೀಕ್ಷೆ ಮುಂದೂಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಮಾಹಿತಿ ಇದ್ದ ಕಾರಣ ಪೊಲೀಸರು ಮುಖ್ಯಮಂತ್ರಿ ಮನೆ ಬಳಿ ಸೂಕ್ತ ಮುಂಜಾಗ್ರತೆ ಕೈಗೊಂಡಿದ್ದರು. ಹಾಗಾಗಿ. ಮುತ್ತಿಗೆ ಹಾಕುವ ಮೊದಲೇ ಬಂಧಿಸಿದರು.
ಸಂಘಟನೆಯ ಮುಖಂಡರಾದ ಮಧುಸೂದನ್, ಚೇತನ್, ಬಾಲಾಜಿ, ಶ್ರೀಜಿತ್, ಮಹಮದ್ ನಿಹಾಲ್, ವಿನಯ್, ವಿಜಯ್, ವಿನ್ಯಾಸ್,
ಅಬ್ದುಲ್, ಶಿವು ಮಲವಗೊಪ್ಪ, ಮಂಜು ಪುರಲೆ, ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.