ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಶತಕ ದಾಟಿದ ಸೋಂಕಿತರ ಸಂಖ್ಯೆ

Last Updated 17 ಜನವರಿ 2022, 5:11 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ ಕೊರೊನಾ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದ್ದು, 339 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನಗರದಲ್ಲಿಯೇ ಹೆಚ್ಚು ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ.

ಶಿವಮೊಗ್ಗ ತಾಲ್ಲೂಕಿನ 120 ಮಂದಿ, ಭದ್ರಾವತಿಯ 105, ತೀರ್ಥಹಳ್ಳಿಯ 23, ಶಿಕಾರಿಪುರದ 4, ಸಾಗರದ 48, ಹೊಸನಗರದ 24, ಸೊರಬದ 8 ಹಾಗೂ ಹೊರ ಜಿಲ್ಲೆಯಿಂದ ಬಂದ 7 ಮಂದಿಗೆ ಸೋಂಕು ತಗುಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1556ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 62 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 36 ಸೋಂಕಿತರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸಿಎಚ್‌ಸಿಯಲ್ಲಿ 30, ಹೋಮ್ ಐಸೊಲೇಷನ್‌ನಲ್ಲಿ 1374, ಟ್ರಯೇಜ್‌ನಲ್ಲಿ 54 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 118 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT