ಸೋಮವಾರ, ಜೂನ್ 21, 2021
29 °C

ದೇವರ ಮೇಲೆ ಭಾರಹಾಕಿ ಕೆಲಸ: ಬಿಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ‘ಸರ್ಕಾರ ನಮಗೆ ಕೊರೊನಾ ವಾರಿಯರ್ ಎಂಬ ಪಟ್ಟ ಕೊಟ್ಟಿದೆ. ಆದರೆ, ಕೊರೊನಾದಿಂದ ಏನಾದರೂ ಹೆಚ್ಚು ಕಡಿಮೆಯಾದರೆ ಏನು ಗತಿ, ನಮ್ಮ ಕುಟುಂಬವನ್ನು ಯಾರು ನೋಡಿಕೊಳ್ಳುತ್ತಾರೆ? ಎಂಬ ಭಯ. ದೇವರ ಮೇಲೆ ಭಾರ ಹಾಕಿ ಕಾರ್ಯನಿರ್ವಹಿಸುತ್ತಿದ್ದೇನೆ’ ಎಂಬುದು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕಿ ಬಿಂದು ಅವರ ಅಳಲು.

‘ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ನಮಗೂ ಕುಟುಂಬ ಇದೆ. ನಮ್ಮ ಸೇವೆ ಜತೆಗೆ ಮನೆಯ ಜವಾಬ್ದಾರಿಯನ್ನು ನಿಭಾಯಿಸಬೇಕಿದೆ. ಕೆಲವೊಮ್ಮೆ ಅವಧಿಗಿಂತ ಹೆಚ್ಚು ಕೆಲಸ ಮಾಡಬೇಕಿದೆ. ಪಿಪಿಇ ಕಿಟ್ ಹಾಕಿಕೊಂಡು ಕೆಲಸ ಮಾಡುತ್ತಿರುವುರಿಂದ ನನ್ನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ’.

‘ಹಲವು ಸಮಸ್ಯೆಗಳ ಮಧ್ಯೆ ಕೆಲಸ ಮಾಡುತ್ತಿದ್ದೇವೆ. ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿ ನನಗೆ ಏನಾದರೂ ಹೆಚ್ಚು ಕಡಿಮೆಯಾದರೆ ನನ್ನ ಕುಟುಂಬ ಹಾಗೂ ನನ್ನ ನಂಬಿ ಬದುಕುತ್ತಿರುವರನ್ನು ಯಾರು ನೋಡಿಕೊಳ್ಳುತ್ತಾರೆ ಎಂಬ ಭಯ ಇದ್ದರೂ ಸೇವೆ ಮಾಡುವ ಅನಿವಾರ್ಯ ಇದೆ. ನನ್ನಿಂದ ಮಕ್ಕಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಮಕ್ಕಳನ್ನು ಊರಿನಲ್ಲಿ ಬಿಟ್ಟಿದ್ದೇನೆ. ಮಕ್ಕಳ ಮುಖ ನೋಡಿ ತುಂಬಾ ದಿನಗಳಾಗಿವೆ’ ಎನ್ನುವುದು ಅವರ ನೋವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು