ಭದ್ರಾವತಿ: ನಗರದ ನ್ಯೂ ಕಾಲೊನಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಪ್ರವೀಣ್ ಅವರ ಓಮಿನಿ ಬೆಂಕಿಗೆ ಆಹುತಿಯಾಗಿದೆ.
ಅವರು ಓಮಿನಿಯನ್ನು ಮನೆಯ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದರು. ಮಧ್ಯರಾತ್ರಿ ನಡೆದ ಬೆಂಕಿ ಅನಾಹುತದಲ್ಲಿ ವಾಹನದ ಎಡಭಾಗದ ಎರಡು ಟಯರ್‌ಗಳು ಸುಟ್ಟು ಕರಕಲಾಗಿವೆ.
ತಕ್ಷಣ ಮನೆಯವರೆ ಬೆಂಕಿಯನ್ನು ನಂದಿಸಿದ್ದಾರೆ. ‘ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ’ ಎಂದು ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.