ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನ.8ರಂದು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಇಬ್ಬರೂ ಎಚ್ಎಎಲ್ನಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ತಲುಪಲಿದ್ದಾರೆ. ಆದರೆ, ಇಬ್ಬರೂ ಬರುತ್ತಿರುವ ಹೆಲಿಕಾಪ್ಟರ್, ಸಮಯ ಬೇರೆ ಬೇರೆ.

ಯಡಿಯೂರಪ್ಪ ಅವರು ಅಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರು ಬಿಟ್ಟು 9.50ಕ್ಕೆ ಶಿವಮೊಗ್ಗ ಸರ್ಕಿಟ್ ಹೌಸ್ ಹೆಲಿಪ್ಯಾಡ್ ತಲುಪಲಿದ್ದಾರೆ. 10ಕ್ಕೆ ರೋಟರಿ ಸಂಸ್ಥೆ ಹಮ್ಮಿಕೊಂಡಿರುವ ಜ್ಞಾನದೀವಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ನಂತರ ಸಹ್ಯಾದ್ರಿ ಕಾಲೇಜು ಹೊರವಲಯ ರಸ್ತೆಯ ಕಿಯಾ ಶೋರೂಂ ಉದ್ಘಾಟಿಸುವರು. ಮಧ್ಯಾಹ್ನ 3ಕ್ಕೆ ಸರ್ಕಿಟ್ ಹೌಸ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಸಂಜೆ 4ಕ್ಕೆ ಬೆಂಗಳೂರಿಗೆ ತೆರಳುವರು.

ಸಿದ್ದರಾಮಯ್ಯ 10.30ಕ್ಕೆ ಎಚ್ಎಎಲ್ ಬಿಟ್ಟು 11.40ಕ್ಕೆ ಸರ್ಕಿಟ್ ಹೌಸ್ ಹೆಲಿಪ್ಯಾಡ್ ತಲುಪುವರು. ನಂತರ ಮಾಜಿ ಶಾಸಕ ಶ್ರೀನಿವಾಸ್ ಅವರ ಪುತ್ರಿಯ ವಿವಾಹ, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.30ಕ್ಕೆ ಬೆಂಗಳೂರಿಗೆ ತೆರಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.