ಬುಧವಾರ, ಜೂನ್ 16, 2021
27 °C

ಶಿವಮೊಗ್ಗ: ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರ ಸೋಂಕಿನಿಂದ ಒಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 11 ಜನರಿಗೆ ಕಪ್ಪು ಶಿಲೀಂಧ್ರ ಕಾಯಿಲೆ ಇರುವುದು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಶಿವಮೊಗ್ಗ ತಾಲೂಕಿನವರು. ಇದೇ ಕಾಯಿಲೆಯಿಂದ ಬಳಲುತ್ತಿರುವ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಆದರೆ, ಕಪ್ಪು ಶಿಲೀಂಧ್ರ ಕಾಯಿಲೆಯಿಂದಲೇ ಮೃತಪಟ್ಟಿರುವುದನ್ನು ಆಸ್ಪತ್ರೆ ಆಡಳಿತ ಮಂಡಳಿ ದೃಢಪಡಿಸಿಲ್ಲ.

ಕಪ್ಪು ಶಿಲೀಂಧ್ರ ರೋಗಿಗಳ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಯ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ.ಗಂಗಾಧರ್ ನೇತೃತ್ವದಲ್ಲಿ ಏಳು ತಜ್ಞ ವೈದ್ಯರನ್ನು ಒಳಗೊಂಡ ತಂಡ ರಚಿಸಲಾಗಿದೆ. 30 ಹಾಸಿಗೆಗಳನ್ನು ಸಿದ್ದಪಡಿಸಲಾಗಿದೆ

ಇದನ್ನೂ ಓದಿ... ರಾಜ್ಯದಲ್ಲಿ ಜೂನ್‌ 7ರ ವರೆಗೂ ಲಾಕ್‌ಡೌನ್‌ ವಿಸ್ತರಣೆ– ಸಿಎಂ ಬಿಎಸ್‌ವೈ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು