ಶಿವಮೊಗ್ಗ: ಈರುಳ್ಳಿ ಬೆಲೆ ಏರಿಕೆಪರಿಣಾಮ ಕೃತಕ ಅಭಾವ ಸೃಷ್ಟಿಸುತ್ತಿರುವ ವರ್ತಕರ ಮೇಲೆ ಜಿಲ್ಲಾಡಳಿತ ಹದ್ದಿನ ಕಣ್ಣಿರಿಸಿದೆ.

ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಪರವಾನಗಿ ಆದೇಶ ತಿದ್ದುಪಡಿ-2019 ಜಾರಿಗೊಳಿಸಿದೆ.ಜಿಲ್ಲೆಯ ಈರುಳ್ಳಿ ಸಗಟು ಮತ್ತು ಚಿಲ್ಲರೆ ವರ್ತಕರು ತಕ್ಷಣ ಪರವಾನಗಿ ಪಡೆಯಬೇಕು ಎಂದು ಸೂಚಿಸಿದೆ.

ಈರುಳ್ಳಿ ಬೆಲೆ ಗಗನಕ್ಕೇರಿದ ಲಾಭ ಪಡೆಯಲುಕೆಲವು ವರ್ತಕರು ಈರುಳ್ಳಿ ಅಕ್ರಮ ದಾಸ್ತಾನು ಮಾಡುತ್ತಿದ್ದಾರೆ.ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ. ಹಾಗಾಗಿ,ಶಿವಮೊಗ್ಗ ನಗರ ಮತ್ತು ಭದ್ರಾವತಿ ಈರುಳ್ಳಿ ಸಗಟು ಮತ್ತು ಚಿಲ್ಲರೆ ವರ್ತಕರು ತಕ್ಷಣ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರು, ತಹಶೀಲ್ದಾರರಿಂದ ತಕ್ಷಣ ಪರವಾನಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಸೂಚಿಸಿದೆ.

ಈರುಳ್ಳಿ ಅನಧಿಕೃತವಾಗಿ ದಾಸ್ತಾನು ಮಾಡಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.