ಶುಕ್ರವಾರ, ಮಾರ್ಚ್ 24, 2023
22 °C

ಹೊಂಬುಜ ಪದ್ಮಾವತಿ ದೇವಿ ದರ್ಶನಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಿಪ್ಪನ್‌ಪೇಟೆ: ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಜೈನರ ಪ್ರಸಿದ್ಧ ಯಾತ್ರಾ ಸ್ಥಳ ಹೊಂಬುಜ ಅತಿಶಯ ಮಹಾ ಕ್ಷೇತ್ರದಲ್ಲಿ ಜುಲೈ 5ರಿಂದ ಬಸದಿಗಳ ದರ್ಶನ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರ ದರ್ಶನಕ್ಕೆ ಮುಕ್ತ ಅವಕಾಶ ನೀಡಲಾಗಿದೆ.

ಸರ್ಕಾರದ ಮಾರ್ಗಸೂಚಿಯಂತೆ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ ನಿಯಮ ಪಾಲಿಸಬೇಕು. ಪೂಜೆಗೆ ಮನೆ ಹಾಗೂ ಮಾರುಕಟ್ಟೆಗಳಿಂದ ತಂದ ವಸ್ತುಗಳನ್ನು ಸ್ವೀಕರಿಸುವುದಿಲ್ಲ. ದೇವರ ದರ್ಶನಕ್ಕೆ ಕೇವಲ ಒಬ್ಬರಿಗೆ ಗರಿಷ್ಠ 10 ನಿಮಿಷಗಳ ಸಮಯಾವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ಊಟ ಮತ್ತು ವಸತಿ ವ್ಯವಸ್ಥೆ ಇದೆ ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.