ಭಾನುವಾರ, ನವೆಂಬರ್ 28, 2021
21 °C

ಮನೆಯಲ್ಲೇ ಕುಳಿತು ಟೀಕಿಸುವ ವಿರೋಧ ಪಕ್ಷಗಳು: ಯಡಿಯೂರಪ್ಪ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಬಸವರಾಜ ಬೊಮ್ಮಾಯಿ ಸಂಪುಟದ ಎಲ್ಲ ಸಚಿವರೂ ಅತಿವೃಷ್ಟಿಗೆ ನಲುಗಿದ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ವಿರೋಧ ಪಕ್ಷಗಳ ಮುಖಂಡರು ಮನೆಯಲ್ಲೇ ಕುಳಿತು ಟೀಕಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಕಿದರು.

ನಗರದಲ್ಲಿ ಗುರುವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಈ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಅವರು ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿಕೊಂಡಿದ್ದೇನೆ. ಕಾಂಗ್ರೆಸ್‌ ಸ್ನೇಹಿತರು ಎಲ್ಲದಕ್ಕೂ ಟೀಕೆ ಮಾಡುತ್ತಿದ್ದಾರೆ. ಚುನಾವಣಾ ಫಲಿತಾಂಶ ಬಂದ ಬಳಿಕ, ಅವರಿಗೆ ವಾಸ್ತವ ಸ್ಥಿತಿಯ ಅರಿವಾಗುತ್ತದೆ. ಜನರೇ ಅವರಿಗೆ ತಕ್ಕ ಬುದ್ದಿ ಕಲಿಸುತ್ತಾರೆ. ಬೆಲೆ ಏರಿಕೆ ವಿಷಯ ಚುನಾವಣೆ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ ಎಂದು ಸಮರ್ಥಿಸಿಕೊಂಡರು.

ಪರಿಷತ್ ಚುನಾವಣೆಯ 25 ಕ್ಷೇತ್ರಗಳಲ್ಲಿ 20 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿದೆ. ಕನಿಷ್ಠ 15 ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಶಿವಮೊಗ್ಗ ಕ್ಷೇತ್ರ ಬಿಜೆಪಿ ವಶವಾಗಲಿದೆ. ವಿಧಾನಪರಿಷತ್‌ನಲ್ಲಿ ಬಹುಮತ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ ಮಾಡಲಾಗಿದೆ. ನನ್ನ ಅವಧಿಯಲ್ಲಾದ ಕೆಲಸ, ಬೊಮ್ಮಾಯಿ ಸರ್ಕಾರದ ಕೆಲಸ ಜನರ ಗಮನ ಸೆಳೆದಿದೆ. ಬಡವರ ಪರ ಯೋಜನೆಗಳು ಚುನಾವಣೆಯಲ್ಲಿ ಲಾಭ ತರಲಿವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು