ಸೋಮವಾರ, ನವೆಂಬರ್ 30, 2020
20 °C

ಕಾರ್ಗಲ್: ಪ.ಪಂ. ಅಧ್ಯಕ್ಷರಾಗಿ ವಾಸಂತಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಗಲ್: ಇಲ್ಲಿನ ಕಾರ್ಗಲ್‌–ಜೋಗ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ಬಿಜೆಪಿಯ ವಾಸಂತಿ ರಮೇಶ್, ಉಪಾಧ್ಯಕ್ಷರಾಗಿ ಪಿ. ಮಂಜುನಾಥ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 11 ಸ್ಥಾನಗಳ ಪೈಕಿ ಬಿಜೆಪಿ 9, ಕಾಂಗ್ರೆಸ್ 1, ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನ ಪಡೆದಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಹರೀಶ್ ಗೌಡ ಬಿಜೆಪಿ ಬೆಂಬಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು. ಇದರಿಂದ ಎರಡನೇ ಬಾರಿಗೆ ಬಿಜೆಪಿ ಇಲ್ಲಿನ ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿದಂತಾಗಿದೆ.

ಸದಸ್ಯರಾದ ನಾಗರಾಜ ವಾಟೆಮಕ್ಕಿ, ಲಲಿತಾ ಎಂ. ರಾಜು, ಉಮೇಶ ಕೆಮ್ಮಣ್ಣಗಾರು, ಬಾಲಸುಬ್ರಮಣ್ಯ, ಲಕ್ಷ್ಮಿರಾಜು, ಜಯಲಕ್ಷ್ಮಿ, ಹರೀಶ್ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ರಾಜಶೇಖರ ಗಾಳಿಪುರ, ಎಪಿಎಂಸಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು, ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸದಸ್ಯರಾದ ಕೆ.ಆರ್. ಗಣೇಶ್ ಪ್ರಸಾದ್, ಮೈತ್ರಿ ಪಾಟೀಲ್, ತುಕಾರಾಂ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.