ಶುಕ್ರವಾರ, ಮಾರ್ಚ್ 24, 2023
22 °C

ಪವಿತ್ರಾ ರಾಮಯ್ಯಗೆ ‘ಕಾಡಾ’ ಅಧ್ಯಕ್ಷತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ನೂತನ ಅಧ್ಯಕ್ಷರಾಗಿ ಪವಿತ್ರಾ ರಾಮಯ್ಯ ನೇಮಕವಾಗಿದ್ದಾರೆ.

ತಾಲ್ಲೂಕಿನ ಮುತ್ತಿನಕೊಪ್ಪದ ಪವಿತ್ರಾ ರಾಮಯ್ಯ ರೈತ ಹೋರಾಟಗಾರ್ತಿ. ರೈತ ಪರ ಹೋರಾಟಗಳ ಜತೆ ಜನ ಸಾಮಾನ್ಯರ ಕಷ್ಟಗಳಿಗೂ ಧ್ವನಿಯಾದವರು. ಪತಿಯ ಗ್ರಾಮ ಕಾಚನಕಟ್ಟೆಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಅವರು, ಜೆಡಿಎಸ್‌ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ನಂತರ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. 

ಬಿಜೆಪಿಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರಿಗೆ ರಾಜ್ಯ ಸರ್ಕಾರ ಕಾಡಾ ಜವಾಬ್ದಾರಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು