ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 10 ಕೋಟಿ ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ

ಶಾಸಕ ಕುಮಾರ್ ಬಂಗಾರಪ್ಪ
Last Updated 27 ಜೂನ್ 2020, 15:01 IST
ಅಕ್ಷರ ಗಾತ್ರ

ಸೊರಬ: ಭವಿಷ್ಯದ ದೃಷ್ಟಿಯಿಂದ ಪಟ್ಟಣಕ್ಕೆ ಹೊಂದಿಕೊಂಡಿರುವ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ₹ 10 ಕೋಟಿ ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರು ಯೋಜನೆಗೆನೀಲನಕ್ಷೆ ತಯಾರಿಸಲಾಗಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.

ಶನಿವಾರ ಪಟ್ಟಣ ಸಮೀಪದ ಕುಣಜಿಬೈಲು ಗ್ರಾಮದ ರಸ್ತೆ ನಿರ್ಮಾಣ ಕುರಿತು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.

ಕೊಡಕಣಿ ಹಾಗೂ ಹಿರೇಶಕುನ ಗ್ರಾಮ ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲಿ ಸರ್ಕಾರಿ ಕಟ್ಟಡ ಹಾಗೂ ನೌಕರರಿಗೆ ಕೊಠಡಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಸರ್ವೆ ಮಾಡಲಾಗಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕುಣಜಿಬೈಲು ಗ್ರಾಮದ ನಿವಾಸಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ ದೊರೆಯಲಿದೆ ಎಂದರು.

ಹಲವು ವರ್ಷಗಳಿಂದ ರಸ್ತೆ ಸಂಪರ್ಕವಿಲ್ಲದೇ ಇಲ್ಲಿನ ಜನರು ಹಲವು ಸಮಸ್ಯೆಯನ್ನು ಎದುರಿಸುತ್ತಿದ್ದರು. 6ನೇ ವಾರ್ಡ್‍ಗೆ ಒಳಪಡುವ ಪ್ರದೇಶದಲ್ಲಿ ಕ್ಲಿಷ್ಟಕರ ರಸ್ತೆಯಲ್ಲಿ ಜನರು ಸಂಚರಿಸುವುದು ಕಷ್ಟಕರವಾಗಿತ್ತು. ಈ ನಿಟ್ಟಿನಲ್ಲಿ ಮಳೆಹಾನಿ ದುರಸ್ತಿ ಅನುದಾನದ ₹ 90 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕುಣಜಿಬೈಲು ಮಾರ್ಗವಾಗಿ ಸೊರಬ-ಉಳವಿ ಮುಖ್ಯರಸ್ತೆ, ನಡಹಳ್ಳಿ, ಚಂದ್ರಗುತ್ತಿ ಗ್ರಾಮಕ್ಕೆ ಸರಪಳಿ ರಸ್ತೆ ನಿರ್ಮಾಣ ಮಾಡುವ ಚಿಂತನೆ ಹೊಂದಿದ್ದು, ಇದರಿಂದ ಹಲವು ಗ್ರಾಮಗಳಿಗೆ ಸೊರಬ ಮುಖ್ಯ ರಸ್ತೆ ಬದಲಿಯಾಗಿ ಸರ್ಕಾರಿ ಆಸ್ಪತ್ರೆ, ಕೋರ್ಟ್, ಸಂತೆ ಮೈದಾನ ಸೇರಿ ವಿವಿಧ ಇಲಾಖೆಗಳಿಗೆ ದಿನ ನಿತ್ಯ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ರಸ್ತೆ ನಿರ್ಮಾಣ ಸಂಬಂಧ ಪಟ್ಟಣ ಪಂಚಾಯಿತಿ, ಅರಣ್ಯ ಇಲಾಖೆ, ಕಂದಾಯ ಅಧಿಕಾರಿಗಳು ಚರ್ಚಿಸಿ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಗದೀಶ್ ನಾಯ್ಕ್, ಎಂಜಿನಿಯರ್ ಪ್ರದೀಪ್, ಪಿ.ಸಿ. ಪ್ರಮೋದ್, ಶೆಲ್ಜಾ, ಪಟ್ಟಣ ಪಂಚಾಯಿತಿ ಸದಸ್ಯ ಎಂ.ಡಿ. ಉಮೇಶ್, ಪ್ರಮುಖರಾದ ಭೋಗೇಶ್, ಕೃಷ್ಣಮೂರ್ತಿ ಕೊಡಕಣಿ, ಹೂವಪ್ಪ ಕೊಡಕಣಿ, ದೇವೇಂದ್ರಪ್ಪ ಮಾವಲಿ, ಚೇತನ್, ಪ್ರಭು, ಅಶೋಕ್, ಆಟೊ ಶಿವು, ಹನುಮಂತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT