ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಟುಡಿಯೊ ತೆರೆಯಲು ಅನುಮತಿಗೆ ಛಾಯಾಗ್ರಹಕರ ಆಗ್ರಹ

Last Updated 28 ಏಪ್ರಿಲ್ 2021, 13:48 IST
ಅಕ್ಷರ ಗಾತ್ರ

ಶಿವಮೊಗ್ಗ: ಕೊರೊನಾ ವೈರಸ್‌ ವೇಗವಾಗಿ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಮೇ 12ರವರೆಗೆ ಜನತಾ ಕರ್ಫ್ಯೂ ಜಾರಿಗೊಳಿಸಿದೆ. ನಿಯಮಗಳ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಲುವೃತ್ತಿಪರ ಛಾಯಾಗ್ರಾಹಕರಿಗೆ ಅವಕಾಶ ನೀಡಬೇಕು. ಸ್ಟುಡಿಯೊ ತೆರೆಯಲು ಅನುಮತಿ ನೀಡಬೇಕು ಎಂದು ಜಿಲ್ಲಾ ಛಾಯಾಗ್ರಾಹಕರ ಸಂಘದ ಸದಸ್ಯರು ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಸುಮಾರು 25 ವರ್ಷಗಳಿಂದ ಜಿಲ್ಲಾ ಛಾಯಾಗ್ರಾಹಕರ ಸಂಘ ಕಾರ್ಯನಿರ್ವಹಿಸುತ್ತಿದೆ. ಸುಮಾರು 3 ಸಾವಿರಕ್ಕೂ ಹೆಚ್ಚು ವೃತ್ತಿಪರ ಛಾಯಾಗ್ರಾಹಕರಿದ್ದಾರೆ. 350ಕ್ಕೂ ಹೆಚ್ಚು ಸ್ಟುಡಿಯೊಗಳಿವೆ. ಕೆಲವರು ಪತ್ರಿಕಾ ಮಾಧ್ಯಮಗಳಲ್ಲಿ, ಮದುವೆ ಸಮಾರಂಭ ಹಾಗೂ ಸಣ್ಣಪುಟ್ಟ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವರ್ಷದಲ್ಲಿ 6 ತಿಂಗಳು ಮದುವೆ ಮತ್ತು ಬೇರೆ ಬೇರೆ ಶುಭ ಸಮಾರಂಭಗಳು ನಡೆಯುತ್ತವೆ. ಉಳಿದ ದಿನಗಳಲ್ಲಿ ಛಾಯಾಗ್ರಾಹಕರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಹಾಗಾಗಿ, ಜಿಲ್ಲಾಡಳಿತ ನೆರವಾಗಬೇಕು ಎಂದು ಕೋರಿದರು.

ಕೋವಿಡ್‌ನಿಂದ ಜಿಲ್ಲೆಯ ಎಲ್ಲಾ ಛಾಯಾಗ್ರಾಹಕರು ತೊಂದರೆ ಅನುಭವಿಸಿದ್ದಾರೆ. ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲೆಯ ಸಂಸದರಿಗೆ ಆರ್ಥಿಕ ಪರಿಹಾರ ಕೋರಿ ಮನವಿ ಮಾಡಿಕೊಂಡಿದ್ದರೂ ಇಲ್ಲಿಯವರೆಗೆ ಆರ್ಥಿಕ ನೆರವು ದೊರೆತಿಲ್ಲ. ಮತ್ತೆ ಲಾಕ್‌ಡೌನ್‌ನಿಂದ ಛಾಯಾಗ್ರಾಹಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸ್ಟುಡಿಯೊ ತೆರೆಯಲು ಅವಕಾಶ ನೀಡದಿದ್ದರೆ ಛಾಯಾಗ್ರಾಹಕರ ಕುಟುಂಬವು ಸಂಕಷ್ಟ ಅನುಭವಿಸಲಿದೆ ಎಂದು ಅಳಲು ತೋಡಿಕೊಂಡರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ್, ಛಾಯಾಗ್ರಹಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ಜಿ.ಎಂ.ಲಿಂಗರಾಜು, ಶಿವಮೊಗ್ಗ ಯೋಗರಾಜ್, ಮೋಹನ್, ಕೆ.ಆರ್.ಸೋಮನಾಥ್, ಶಿವಮೊಗ್ಗ ನಾಗರಾಜ್‌ ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧ ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT