ಸಾಗರ: ‘ದೈಹಿಕ, ಮಾನಸಿಕ ನ್ಯೂನತೆಯುಳ್ಳ ವಿಶೇಷಚೇತನ ಮಕ್ಕಳ ಶಿಕ್ಷಣಕ್ಕೆ ಸಮಾಜದ ಎಲ್ಲ ವರ್ಗದವರ ಪ್ರೋತ್ಸಾಹ ಅಗತ್ಯ’ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷೆ ಪ್ರಭಾವತಿ ಶ್ರೀಧರ್ ಹೇಳಿದರು.
ತಾಲ್ಲೂಕಿನ ಭೀಮನಕೋಣೆ ಗ್ರಾಮದಲ್ಲಿರುವ ಚೈತನ್ಯ ವಿಶೇಷ ಶಿಕ್ಷಣ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಲಯನ್ಸ್ ಸಂಸ್ಥೆಯಿಂದ ಸಹಾಯಧನ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶೇಷಚೇತನ ಮಕ್ಕಳ ಲಾಲನೆ, ಪಾಲನೆ ಮಾಡುವ ಜೊತೆಗೆ ಅವರಿಗೆ ಶಿಕ್ಷಣ ಒದಗಿಸುವ ಕ್ಲಿಷ್ಟಕರ ಕಾರ್ಯದಲ್ಲಿ ತೊಡಗಿರುವ ಸಂಸ್ಥೆಗಳಿಗೆ ನೆರವು ನೀಡುವುದು ಎಲ್ಲರ ಕರ್ತವ್ಯ ಎಂದರು.
ಪ್ರಮುಖರಾದ ಎನ್.ಆರ್.ವಿನಯ್, ಕೆ.ಜಿ.ಗುರುಲಿಂಗಯ್ಯ, ಶಾಂತಲಾ ಸುರೇಶ್, ಬಿ.ಎಚ್.ರಾಘವೇಂದ್ರ, ಈಳಿ ಶ್ರೀಧರ್, ಸವಿತಾ ಮಹಾಬಲೇಶ್, ಎಚ್.ಎಂ.ನಾಗರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.