ಶಿವಮೊಗ್ಗ: ಇಲ್ಲಿನ ಸೋಗಾನೆಯಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದ ಉದ್ಘಾಟನೆಗೆ ಸೋಮವಾರ ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಧಾನಿ ಅವರ ಕಾರ್ಯಕ್ರಮಕ್ಕೆ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಮುಂಭಾಗದಲ್ಲಿ ಬೃಹತ್ ವೇದಿಕೆ ಸಜ್ಜುಗೊಂಡಿದೆ. 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಭದ್ರತೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಬೆಳಿಗ್ಗೆ 10 ಗಂಟೆಯೊಳಗೆ ಕಾರ್ಯಕ್ರಮದ ಸ್ಥಳಕ್ಕೆ ಬರಲು ಜಿಲ್ಲಾಡಳಿತ ಸೂಚಿಸಿದೆ. ಹೀಗಾಗಿ ಮುಂಜಾನೆಯಿಂದಲೇ ಶಿವಮೊಗ್ಗ, ಭದ್ರಾವತಿ, ನರಸಿಂಹರಾಜಪುರ ಭಾಗದಿಂದ ಸೋಗಾನೆಯತ್ತ ವಾಹನಗಳು ಸಾಲುಗಟ್ಟಿವೆ.

ಕಾರ್ಯಕ್ರಮಕ್ಕೆ ಬರುವವರಿಗೆ ಸಮಾರಂಭದ ಸ್ಥಳದ ಆಸುಪಾಸಿನಲ್ಲಿ ವಾಹನ ನಿಲುಗಡೆಗೆ ಪಾರ್ಕಿಂಗ್ ಸ್ಥಳ ನಿಗದಿಗೊಳಿಸಲಾಗಿದೆ. 200 ಕೌಂಟರ್‌ಗಳಲ್ಲಿ ಉಪಾಹಾರ, ಊಟದ ವ್ಯವಸ್ಥೆ ಮಾಡಲಾಗಿದೆ.

ಸೋಗಾನೆ ರಸ್ತೆಯಲ್ಲಿ ವಾಹನ ದಟ್ಟಣೆ ಆಗಿದ್ದು, ಹೆಜ್ಜೆ ಹೆಜ್ಜೆಗೂ ನಿಂತಿರುವ ಪೊಲೀಸರು ಸಂಚಾರ ವ್ಯವಸ್ಥೆ ನಿಭಾಯಿಸುತ್ತಿದ್ದಾರೆ.

ಕಾರ್ಯಕ್ರಮ ಜಿಲ್ಲಾಡಳಿತ ಆಯೋಜಿಸಿದ್ದರೂ ಇಡೀ ನಗರ ಕೇಸರಿಮಯವಾಗಿ ಮಾರ್ಪಟ್ಟಿದೆ. ಬಿಜೆಪಿಯ ಧ್ವಜಗಳು, ನಾಯಕರ ಕಟೌಟ್, ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ 80ನೇ ಹುಟ್ಟುಹಬ್ಬ ಕೂಡ ಸೋಮವಾರ ಇದ್ದು, ಅವರಿಗೆ ಶುಭಾಶಯ ಕೋರುವ ಭರಾಟೆಯೂ ಫ್ಲೆಕ್ಸ್‌ಗಳಲ್ಲಿ ಕಾಣಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.