ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

ಪಿ.ಎಂ.ಪೋಷಣ್ ಮಧ್ಯಾಹ್ನ ಉಪಾಹಾರ ಯೋಜನೆಗೆ ಚಾಲನೆ
Published 18 ಆಗಸ್ಟ್ 2023, 14:27 IST
Last Updated 18 ಆಗಸ್ಟ್ 2023, 14:27 IST
ಅಕ್ಷರ ಗಾತ್ರ

ಶಿವಮೊಗ್ಗ: ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ನಿವಾರಣೆಗೆ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಹೇಳಿದರು.

ಇಲ್ಲಿನ ಪಿಳ್ಳಂಗಿರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಪಿ.ಎಂ.ಪೋಷಣ್ ಮಧ್ಯಾಹ್ನ ಉಪಾಹಾರ ಯೋಜನೆಗೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನು ವಿತರಣೆ ಮಾಡಿ ಅವರು ಮಾತನಾಡಿದರು.

ಸರ್ಕಾರದಿಂದ ಈ ಹಿಂದೆ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಒಂದು ದಿನ ಮೊಟ್ಟೆ, ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಾರ್ಷಿಕ 46 ದಿನಗಳ ಕಾಲ ವಿತರಸಲಾಗಿತ್ತು. ಮುಂದಿನ ದಿನದಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಈ ಮಾದರಿಯ ಪೌಷ್ಟಿಕ ಆಹಾರ ಸಿಗಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 1,59,507 ವಿದ್ಯಾರ್ಥಿಗಳಿದ್ದಾರೆ. ವಾರ್ಷಿಕವಾಗಿ ₹7.65 ಕೋಟಿ ಅನುನಾದ ಈ ಯೋಜನೆಯಡಿ ನಿಗದಿಯಾಗಿದೆ. ಪಿಳ್ಳಂಗಿರಿ ಪ್ರೌಢಶಾಲೆಯಲ್ಲಿ ಹಾಜರಿದ್ದ 254 ವಿದ್ಯಾರ್ಥಿಗಳ ಪೈಕಿ 224 ವಿದ್ಯಾರ್ಥಿಗಳು ಮೊಟ್ಟೆ, 29 ವಿದ್ಯಾರ್ಥಿಗಳು ಶೇಂಗಾ ಚಿಕ್ಕಿ ಮತ್ತು ಒಂದು ವಿದ್ಯಾರ್ಥಿ ಬಾಳೆಹಣ್ಣು ಸೇವಿಸಿದರು ಎಂದು ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಹೇಳಿದರು.

ಬಿಇಒ ನಾಗರಾಜ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ದಾದಾಪೀರ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಎಸ್‍ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯಿನಿ ವಿಶಾಲಾಕ್ಷಿ ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT