ಶಿವಮೊಗ್ಗ: 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭದ್ರಾವತಿ ತಾಲ್ಲೂಕಿನ 19 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ₹80 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ.

2022ರಲ್ಲಿ ಬಾಲಕಿಯ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿ ನಂತರ ಆಕೆಯನ್ನು ಮದುವೆಯಾಗಿದ್ದ. ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಪಿಸಿಎಂ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖಾಧಿಕಾರಿ ಇನ್ಸ್ಪೆಕ್ಟರ್ ಅಭಯಪ್ರಕಾಶ್ ಸೋಮನಾಳ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಆರೋಪಿಯಿಂದ ₹80 ಸಾವಿರ ದಂಡದ ಮೊತ್ತ ಪಡೆದು ನೊಂದ ಬಾಲಕಿಗೆ ನೀಡುವಂತೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.