ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಅರಹತೊಳಲು ಕೈಮರದ ಹೃದಯ ಭಾಗದಲ್ಲಿ ವಾಹನ ದಟ್ಟಣೆ ನಿಯಂತ್ರಿಸಿ, ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೋಮವಾರ ಅಗತ್ಯ ಕ್ರಮ ಕೈಗೊಂಡಿದೆ. ಅದಕ್ಕೆ ಅರಹತೊಳಲು ಗ್ರಾಮ ಪಂಚಾಯಿತಿಯೂ ಕೈ ಜೋಡಿಸಿದೆ.

ಹೊಳೆಹೊನ್ನೂರು ಠಾಣೆ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸರು ಕೈಮರದಲ್ಲಿ ವಾಹನ ದಟ್ಟಣೆ ನಿಯಂತ್ರಣ ಸಂಬಂಧ ಜಾಗೃತಿ ಮೂಡಿಸಿದರು. ಎಲ್ಲೆಂದರಲ್ಲಿ ವಾಹನಗಳ ಪಾರ್ಕಿಂಗ್ ಮಾಡಿದ್ದವರಿಗೆ ಹಾಗೂ ಅನಧಿಕೃತವಾಗಿ ರಸ್ತೆ ಅತಿಕ್ರಮಿಸಿಕೊಂಡವರಿಗೆ ಎಚ್ಚರಿಕೆ ನೀಡಿ ತೆರವುಗೊಳಿಸಿದರು. ರಸ್ತೆ ಕಾಣದಂತೆ ಹಾಕಿರುವ ಫ್ಲೆಕ್ಸ್ಗಳನ್ನು ತೆರವುಗೊಳಿಸಲು ಸಂಬಂಧಿಸಿದವರಿಗೆ ಸೂಚಿಸಿದರು.

ಹೈಮಾಸ್ಟ್ ದೀಪ ಅಳವಡಿಕೆ: ಕೈಮರದಲ್ಲಿ ರಾತ್ರಿ ಕತ್ತಲು ಆವರಿಸುತ್ತಿದ್ದಂತೆಯೇ ಸಂಚಾರಕ್ಕೆ ತೊಂದರೆ ಆಗುತ್ತಿತ್ತು. ಅದು ಅಪಘಾತಗಳಿಗೂ ದಾರಿ ಆಗುತ್ತಿತ್ತು. ಅದನ್ನು ತಡೆಯಲು ಅರಹತೊಳಲು ಗ್ರಾಮ ಪಂಚಾಯಿತಿಯಿಂದ ಮೂರು ಹೈಮಾಸ್ಟ್ ದೀಪಗಳನ್ನು ಅಳವಡಿಸಲಾಯಿತು. ಅಪಘಾತಗಳನ್ನು ತಡೆಯಲು ಗ್ರಾಮ ಪಂಚಾಯಿತಿಯಿಂದಲೂ ಜಾಗೃತಿ ಮೂಡಿಸುವುದಾಗಿ ಸದಸ್ಯ ಕುಮಾರನಾಥ ತಿಳಿಸಿದರು.

ಕೈಮರದಲ್ಲಿ ಸಂಚಾರ ಅವ್ಯವಸ್ಥೆ ಹಾಗೂ ಅಪಘಾತಗಳಿಂದ ಆಗುತ್ತಿರುವ ಜೀವ ಹಾನಿ, ಗಾಯಾಳುಗಳ ಸಂಕಷ್ಟದ ಬಗ್ಗೆ ‘ಪ್ರಜಾವಾಣಿ’ಯ ಸೋಮವಾರದ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಇದಕ್ಕೆ ಸ್ಥಳೀಯಾಡಳಿತ ಹಾಗೂ ಪೊಲೀಸ್ ಇಲಾಖೆ ಸ್ಪಂದಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.