ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಅಧೀನಕ್ಕೆ ಪೊಲೀಸ್‌ ವ್ಯವಸ್ಥೆ: ಆಗ್ರಹ

Last Updated 31 ಜನವರಿ 2022, 12:47 IST
ಅಕ್ಷರ ಗಾತ್ರ

ಶಿವಮೊಗ್ಗ: ಎಲ್ಲಾ ರಾಜ್ಯಗಳ ಪೊಲೀಸ್ ವ್ಯಸವ್ಥೆಯನ್ನು ಭಾರತೀಯ ಸೇನೆಯ ರೀತಿ ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿ ಜನತಾ ದಳ (ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್‌ ಗೌಡ ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿದರು.

ಪೊಲೀಸ್ ಪಡೆಗಳನ್ನು ರಾಜ್ಯ ಸರ್ಕಾರದ ಅಧೀನದಿಂದ ಕೇಂದ್ರ ಸರ್ಕಾರದ ಅಧೀನಕ್ಕೆ ಒಳಪಡಿಸಿದರೆ ದೇಶದ ಒಳಗೆ ನಡೆಯುವ ಅಕ್ರಮಗಳು, ಭ್ರಷ್ಟಾಚಾರ, ಕೊಲೆ, ಸುಲಿಗೆ, ಅತ್ಯಾಚಾರ, ಕಿಡ್ನಾಪ್, ಸ್ಮಗ್ಲಿಂಗ್, ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ, ಮಾನವ ಕಳ್ಳಸಾಗಾಣಿಕೆ, ಹೈಟೆಕ್ ವೇಶ್ಯಾವಾಟಿಕೆ, ರೌಡಿಸಂ, ಭೂ ಮಾಫಿಯಾ, ನಕಲಿ ನೋಟುಗಳ ಹಾವಳಿ, ಹವಾಲಾ ದಂಧೆ, ಕಪ್ಪು ಹಣದ ದಂಧೆಗಳನ್ನು ಮಟ್ಟಹಾಕಬಹುದು ಎಂದರು.

ಕ್ರಿಕೆಟ್ ಬೆಟ್ಟಿಂಗ್, ಭೂ ಮಾಫಿಯಾ, ಮೆಡಿಕಲ್ ಮಾಫಿಯಾಗಳಲ್ಲಿ ಆಯಾ ರಾಜ್ಯದ ಕೆಲವು ಪ್ರಭಾವಿ ರಾಜಕಾರಣಿಗಳ ಪ್ರಭಾವ ಇರುತ್ತದೆ. ಇಂತಹ ಪ್ರಭಾವಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ರಾಜಕಾರಣಿಗಳ ಹಸ್ತಕ್ಷೇಪದಿಂದ ಪೊಲೀಸರು ಅಸಹಾಯಕರಾಗಿದ್ದಾರೆ ಎಂದು ದೂರಿದರು.

ದಕ್ಷ ಪೊಲೀಸ್‌ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಂದಿಸುವ ಕೆಲಸಗಳು ನಡೆಯಿತ್ತಿವೆ. ಎಲ್ಲಾ ರಾಜ್ಯಗಳ ಪೊಲೀಸ್ ಪಡೆಗಳನ್ನು ಕೇಂದ್ರದ ವ್ಯಾಪ್ತಿಗೆ ತಂದರೆ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಬಹುದು ಎಂದು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT