ಶುಕ್ರವಾರ, ಮೇ 20, 2022
19 °C

ಈಶ್ವರಪ್ಪ ಬಂಧನಕ್ಕೆ ಪ್ರಸನ್ನಕುಮಾರ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಭ್ರಷ್ಟ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಉಡುಪಿ ಪೊಲೀಸರು ಜಾಮೀನು ರಹಿತ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಜೀವಾವಧಿ ಶಿಕ್ಷೆ ನೀಡಬಹುದಾದ ಪ್ರಕರಣದ ಆರೋಪಿಯಾಗಿರುವ ಈಶ್ವರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದರು.

‘ಈಶ್ವರಪ್ಪ ಅವರನ್ನು ಬಂಧಿಸಬೇಕು. ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳಬೇಕು. ಭಂಡತನಕ್ಕೆ ಬಿದ್ದಿರುವ ಈಶ್ವರಪ್ಪ ರಾಜೀನಾಮೆ ಕೊಡಲು ನಿರಾಕರಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಆರೋಪಿಸಿದರು.

ಸಾವಿನ ಪ್ರಕರಣವನ್ನು ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕು. ಮುಖ್ಯಮಂತ್ರಿ ಬೊಮ್ಮಾಯಿ, ಹಲವು ಸಚಿವರು ಆರೋಪಿ ಸ್ಥಾನದಲ್ಲಿರುವ ಈಶ್ವರಪ್ಪ ಅವರನ್ನು ಸಮರ್ಥಿಸುತ್ತಿದ್ದಾರೆ. ಇದರಿಂದ ರಾಜ್ಯದ ಪೊಲೀಸರಿಂದ ಪ್ರಾಮಾಣಿಕ ತನಿಖೆ ನಿರೀಕ್ಷಿಸುವುದು ಸಾಧ್ಯವಿಲ್ಲ. ನ್ಯಾಯಾಂಗ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ. ಪಾಟೀಲ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.