ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮೀಣ ಭಾಗದಲ್ಲಿ ರಸ್ತೆ, ಸೇತುವೆ ನಿರ್ಮಾಣಕ್ಕೆ ಆದ್ಯತೆ’

Last Updated 2 ನವೆಂಬರ್ 2021, 7:08 IST
ಅಕ್ಷರ ಗಾತ್ರ

ಸಾಗರ: ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ರಸ್ತೆ, ಸೇತುವೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.

ತಾಲ್ಲೂಕಿನ ಭೀಮನಕೋಣೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಸಿದುಹೋಗಿದ್ದ ಹರಡವಡಿಕೆ–ಭೀಮನಕೋಣೆ-ಹೆಗ್ಗೋಡು ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕಳೆದ ಮಳೆಗಾಲದಲ್ಲಿ ಸುರಿದ ವಿಪರೀತ ಮಳೆಯಿಂದ ಭೀಮನಕೋಣೆ-ಹೆಗ್ಗೋಡಿನ ಮುಂಗರವಳ್ಳಿಯ ಸೇತುವೆ ಒಂದು ಭಾಗ ಕುಸಿದು ಹೋಗಿತ್ತು. ಸೇತುವೆ ಅಪಾಯದ ಸ್ಥಿತಿಯಲ್ಲಿರುವುದರಿಂದ ಗ್ರಾಮಸ್ಥರ ಕೋರಿಕೆ ಮೇರೆಗೆ ₹ 50 ಲಕ್ಷ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೋವಿಡ್ ಕಾರಣಕ್ಕೆ ಸರ್ಕಾರ
ದಿಂದ ಅನುದಾನ ಬರುವುದು ವಿಳಂಬವಾದ್ದರಿಂದ ಕೆಲವು ಕಾಮಗಾರಿಗಳಿಗೆ ಅಡ್ಡಿಯುಂಟಾಗಿತ್ತು. ಈಗ ಅನುದಾನ ಬಿಡುಗಡೆಯಾಗುತ್ತಿದ್ದು, ಅಗತ್ಯವಿರುವ ಕಡೆ ತುರ್ತಾಗಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಭೀಮನಕೋಣೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಮೋಹನ್, ಉಪಾಧ್ಯಕ್ಷ ಮಂಜುನಾಥ್ ಶೆಟ್ಟಿ, ಸದಸ್ಯರಾದ ಕೇಶವ, ರಾಜೇಶ್ ಮಾವಿನಸರ, ಎಂ.ಎಸ್. ನಾಗರಾಜ್, ಮಲೆನಾಡು ಪ್ರದೇಶಾಭಿವೃದ್ಧಿ ಸದಸ್ಯ ಬಿ.ಎಚ್. ರಾಘವೇಂದ್ರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ವೆಂಕಟೇಶಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT